ನವದೆಹಲಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಶಿವಸೇನೆಯ ಏಕನಾಥ್ ಶಿಂಧೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಜಿತ್ ಪವಾರ್ ಅವರು ಕೂಡ ಉಪ ಮುಖ್ಯಮಂತ್ರಿಗಳಾಗಿದೆ ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ-ಎನ್ಸಿಪಿ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿತ್ತು.
ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಭವ್ಯವಾದ ಪ್ರಮಾಣ ವಚನ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಹಿರಿಯ ಕೇಂದ್ರ ಸಚಿವರು, ರಾಜ್ಯಪಾಲರು, ಎನ್ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ಅಧಿಕಾರಿಗಳು ಮತ್ತು ಮಹಾಯುತಿಯ ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.