ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಹಣಕಾಸು ನೀತಿ ಸಮಿತಿಯ (PMC) ದ್ವೈಮಾಸಿಕ ಪರಿಶೀಲನಾ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಪ್ರಕಟಿಸಿದ್ದು, ಈ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಈ ಬಗ್ಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದು, ರೆಪೋ ದರದಲ್ಲಿ ಬದಲಾವಣೆ ಮಾಡದೇ ಇರುವ ತೀರ್ಮಾನಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ 4:2ರಷ್ಟು ಸದಸ್ಯರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಬುಧವಾರ ಆರಂಭವಾಗಿದೆ. ಇಂದು ಸಭೆಯ ನಿರ್ಧಾರ ಹೊರ ಬಿದ್ದಿದೆ. ಸಭೆ, ರೆಪೋ ದರದಲ್ಲಿ ಬದಲಾವಣೆ ಮಾಡದಿರುವ ನಿರ್ಧಾರ ತೆಗೆದುಕೊಂಡಿದೆ.
ಈ ಹಿಂದೆ ರೆಪೊ ದರ ಶೇಕಡಾ 6.5ರಷ್ಟಿತ್ತು. ಇದನ್ನೇ ಮುಂದುವರೆಸಲು ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ರಿಸರ್ವ್ ಬ್ಯಾಂಕ್ 11ನೇ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಎಸ್ ಡಿಎಫ್ (ಎಸ್ಡಿಎಫ್) ದರವು ಶೇಕಡಾ 6.25 ಮತ್ತು ಎಂಎಸ್ಎಫ್ (ಎಂಎಸ್ಎಫ್) ದರವು ಶೇಕಡಾ 6.75ರಷ್ಟೇ ಇದೆ, ಅದರಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ರಿಸರ್ವ್ ಬ್ಯಾಂಕ್ ರೆಪೊ ದರದಲ್ಲಿ ಇಳಿಕೆ ಮಾಡದ ಕಾರಣ ದುಬಾರಿ ಸಾಲಗಳಿಂದ ಜನರಿಗೆ ಪರಿಹಾರ ಸಿಕ್ಕಿಲ್ಲ. ರೆಪೊ ದರ ಇಳಿಕೆಯಾದರೆ ಬ್ಯಾಂಕ್ಗಳಿಗೆ ಅಗ್ಗದ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯುತ್ತದೆ. ಇದರಿಂದ ಬ್ಯಾಂಕುಗಳು ಗ್ರಾಹಕರಿಗೆ ಕಡಿಮೆ ಬಡ್ಡಿದರಲ್ಲಿ ಸಾಲ ನೀಡಲು ಸಾಧ್ಯವಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.