ಬೆಂಗಳೂರು: ರಾಜಕೀಯ ಮುತ್ಸದ್ದಿ, ಮಾಜಿ ಮಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಿಗ್ಗೆ ಸುಮಾರು 2:30 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಜನಿಸಿದ ಎಸ್ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಕಾಂಗ್ರೆಸ್ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ ಅವರು ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿ ತಾನೊಬ್ಬ ಸಮರ್ಥ ನಾಯಕ ಎಂಬುದನ್ನು ಸಾಬೀತುಪಡಿಸಿದ್ದರು. ತಮ್ಮ ಕೊನೆಗಾಲದಲ್ಲಿ ಅವರು ಬಿಜೆಪಿ ಸೇರಿದ್ದರು.
ವಿಶ್ವ ಭೂಪಟದಲ್ಲಿ ಬೆಂಗಳೂರನ್ನು ಗುರುತಿಸಿದ ಕೀರ್ತಿಗೆ ಪಾತ್ರರಾಗಿದ್ದ ಅವರು, ಬೆಂಗಳೂರನ್ನು ಟೆಕ್ ಕ್ಯಾಪಿಟಲ್ ಮಾಡುವಲ್ಲಿ ಶ್ರಮಿಸಿದ್ದಾರೆ.
ಕೃಷ್ಣ ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರನ್ನು ಪ್ರಮುಖ ನಾಯಕ ಎಂದು ಕರೆದ ಪ್ರಧಾನಿ, “ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾದ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಯತ್ತ ಗಮನ ಹರಿಸಿದ್ದಕ್ಕಾಗಿ ಪ್ರೀತಿಯಿಂದ ಸ್ಮರಿಸಲ್ಪಡುತ್ತಾರೆ. ಶ್ರೀ ಎಸ್.ಎಂ. ಕೃಷ್ಣಾ ಜಿ ಒಬ್ಬ ಸಮೃದ್ಧ ಓದುಗ ಮತ್ತು ಚಿಂತಕ” ಎಂದಿದ್ದಾರೆ.
“ಹಲವು ವರ್ಷಗಳಿಂದ ಎಸ್.ಎಂ.ಕೃಷ್ಣ ಜೀ ಅವರೊಂದಿಗೆ ಸಂವಹನ ನಡೆಸಲು ನನಗೆ ಅನೇಕ ಅವಕಾಶಗಳು ದೊರೆತಿವೆ ಮತ್ತು ಆ ಸಂವಾದಗಳನ್ನು ನಾನು ಯಾವಾಗಲೂ ಪಾಲಿಸುತ್ತೇನೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ” ಎಂದಿದ್ದಾರೆ..
Shri SM Krishna Ji was a remarkable leader, admired by people from all walks of life. He always worked tirelessly to improve the lives of others. He is fondly remembered for his tenure as Karnataka’s Chief Minister, particularly for his focus on infrastructural development. Shri… pic.twitter.com/Wkw25mReeO
— Narendra Modi (@narendramodi) December 10, 2024
I have had many opportunities to interact with Shri SM Krishna Ji over the years, and I will always cherish those interactions. I am deeply saddened by his passing. My condolences to his family and admirers. Om Shanti.
— Narendra Modi (@narendramodi) December 10, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.