ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ 2 ಲಕ್ಷ ಬಿಮಾ ಸಖಿ ಅಥವಾ ವಿಮಾ ಏಜೆಂಟ್ಗಳನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪಾಣಿಪತ್ನಲ್ಲಿ ‘ಬೀಮಾ ಸಖಿ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದರು.
ಈ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಈ ವರ್ಷ 25 ಸಾವಿರ ಬಿಮಾ ಸಖಿಗಳನ್ನು ನೇಮಿಸಲಾಗುವುದು. ಪ್ರತಿ ಮಹಿಳಾ ವಿಮಾ ಏಜೆಂಟ್ ಸ್ವಯಂಸೇವಕರು ಮೊದಲ ವರ್ಷದಲ್ಲಿ ತಿಂಗಳಿಗೆ 7,000 ರೂಪಾಯಿಗಳನ್ನು, ಎರಡನೇ ವರ್ಷದಲ್ಲಿ ತಿಂಗಳಿಗೆ 6,000 ರೂಪಾಯಿಗಳನ್ನು ಮತ್ತು ಮೂರನೇ ವರ್ಷದಲ್ಲಿ ತಿಂಗಳಿಗೆ 5,000 ರೂಪಾಯಿಗಳನ್ನು ಪಡೆಯುತ್ತಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಹರಿಯಾಣದ ಪಾಣಿಪತ್ನಲ್ಲಿ ನಡೆದ ಸಮಾರಂಭದಲ್ಲಿ ಮಹತ್ವಾಕಾಂಕ್ಷೆಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ‘ಬೀಮಾ ಸಖಿ ಯೋಜನೆ’ ಉಪಕ್ರಮವು 10 ನೇ ತರಗತಿಯನ್ನು ಪೂರ್ಣಗೊಳಿಸಿದ 18-70 ವರ್ಷ ವಯಸ್ಸಿನ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಸೀತಾರಾಮನ್ ಹೇಳಿದರು. ಈ ವರ್ಷದ ಬಜೆಟ್ನಲ್ಲಿ ದೇಶದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳಿಗೆ 3.3 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.