ನವದೆಹಲಿ: ದೇಶಾದ್ಯಂತ ಹಳ್ಳಿಗಳ ಬಯಲು ಶೌಚ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಸ್ವಚ್ಛ ಭಾರತ್ ಮಿಷನ್-ಗ್ರಾಮೀನ್ ಅಡಿಯಲ್ಲಿ ಕೇಂದ್ರದ ಪಾಲು ಈ ವರ್ಷದ ನವೆಂಬರ್ವರೆಗೆ 1,869 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.
ಇಂದು ಲೋಕಸಭೆಯಲ್ಲಿ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಚಿವಾಲಯವು ಈ ಮಾಹಿತಿ ಬಹಿರಂಗಪಡಿಸಿದೆ.
“ಸೋಕ್ ಪಿಟ್ಗಳು, ತ್ಯಾಜ್ಯ ಸ್ಥಿರೀಕರಣ ಕೊಳಗಳು ಮತ್ತು ವಿಕೇಂದ್ರೀಕೃತ ತ್ಯಾಜ್ಯನೀರಿನ ಸಂಸ್ಕರಣಾ ವ್ಯವಸ್ಥೆಯನ್ನು ಉದ್ದೇಶಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದೆ.
MGNREGS ಅಡಿಯಲ್ಲಿ ಇದುವರೆಗೆ 56 ಲಕ್ಷಕ್ಕೂ ಹೆಚ್ಚು ವೈಯಕ್ತಿಕ ಶೌಚಾಲಯಗಳು, ಸುಮಾರು 1.4 ಲಕ್ಷ ಶಾಲೆಗಳು ಮತ್ತು ಅಂಗನವಾಡಿ ಶೌಚಾಲಯಗಳು ಮತ್ತು 64,000 ಸಮುದಾಯ ನೈರ್ಮಲ್ಯ ಸಂಕೀರ್ಣಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.