ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ 26 ನೇ ಗವರ್ನರ್ ಆಗಿ 56 ವರ್ಷದ ಸಂಜಯ್ ಮಲ್ಹೋತ್ರಾ ಅವರು ಮೂರು ವರ್ಷಗಳ ಅವಧಿಗೆ ಅಧಿಕೃತವಾಗಿ ಇಂದು ಅಧಿಕಾರ ವಹಿಸಿಕೊಂಡರು. ಕಂದಾಯ ಕಾರ್ಯದರ್ಶಿ ಮತ್ತು ಮೂರು ದಶಕಗಳ ನಾಗರಿಕ ಸೇವಾ ಅನುಭವ ಹೊಂದಿರುವ ಅನುಭವಿ ಅಧಿಕಾರಿಯಾಗಿರುವ ಮಲ್ಹೋತ್ರಾ ಅವರು, ಆರು ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದ ಶಕ್ತಿಕಾಂತ ದಾಸ್ ಅವರ ಉತ್ತರಾಧಿಕಾರಿಯಾಗಿದ್ದಾರೆ.
ಮಲ್ಹೋತ್ರಾ ಅವರ ನೇಮಕವು ದುವ್ವೂರಿ ಸುಬ್ಬರಾವ್ ಅವರ ನಂತರ ನೇರವಾಗಿ ಹಣಕಾಸು ಸಚಿವಾಲಯದಿಂದ ವರ್ಗಾವಣೆಗೊಂಡ ಮೊದಲ ಆರ್ಬಿಐ ಗವರ್ನರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಮಲ್ಹೋತ್ರಾ ಅವರು ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್ಬಿಐ ತಿಳಿಸಿದೆ.
ಸಂಜಯ್ ಮಲ್ಹೋತ್ರಾ ಅವರು 1990ರ ಬ್ಯಾಚ್ನ ರಾಜಸ್ಥಾನ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
Shri Sanjay Malhotra takes charge as the 26th Governor of Reserve Bank of India for the next 3 years w.e.f December 11, 2024#RBI #rbigovernor #sanjaymalhotra #rbitoday pic.twitter.com/aa7UdIcWIS
— ReserveBankOfIndia (@RBI) December 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.