ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (ONOE) ಭಾರತದ ಜಿಡಿಪಿಯನ್ನು 1 ರಿಂದ 1.5 ಪ್ರತಿಶತದಷ್ಟು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ONOE ಸಮಿತಿಯ ಅಧ್ಯಕ್ಷರೂ ಆಗಿರುವ ಕೋವಿಂದ್, ಇದು ದೇಶದ ರಾಜಕೀಯ ಚಿತ್ರಣದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ಹೇಳಿದರು.
ಕಾನ್ಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೋವಿಂದ್, ʼಒಂದು ರಾಷ್ಟ್ರ, ಒಂದು ಚುನಾವಣೆʼ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಒಮ್ಮತವನ್ನು ನಿರ್ಮಿಸಬೇಕಾಗಿದೆ ಎಂದರು.
ದೇಶದಲ್ಲಿ ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಬೆಂಬಲ ವ್ಯಕ್ತಪಡಿಸಿದ ಕೋವಿಂದ್, ಈ ವಿಷಯವು ರಾಷ್ಟ್ರದ ಹಿತಾಸಕ್ತಿಯಾಗಿದೆ ಎಂದು ಪ್ರತಿಪಾದಿಸಿದರು.
ಈ ವರ್ಷದ ಸೆಪ್ಟೆಂಬರ್ನಲ್ಲಿ, ಕೇಂದ್ರ ಸಚಿವ ಸಂಪುಟವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮವನ್ನು ಅನುಮೋದಿಸಿತು, ಲೋಕಸಭೆ, ವಿಧಾನಸಭೆ, ನಗರ ಸಂಸ್ಥೆಗಳು ಮತ್ತು ಪಂಚಾಯತ್ಗಳಿಗೆ ಏಕಕಾಲೀನ ಚುನಾವಣೆಗಳನ್ನು ಪ್ರಸ್ತಾಪಿಸಿ, ಎಲ್ಲವನ್ನೂ 100 ದಿನಗಳ ಕಾಲಮಿತಿಯೊಳಗೆ ನಡೆಸುವ ಪ್ರಸ್ತಾಪವನ್ನು ಇದು ಹೊಂದಿದೆ.
ಕೋವಿಂದ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಈ ಸಲಹೆಗಳನ್ನು ತಮ್ಮ ಸಮಗ್ರ ವರದಿಯಲ್ಲಿ ಮಂಡಿಸಿದೆ. ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.