ಗುವಾಹಟಿ: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಅಸ್ಸಾಂ ಸರ್ಕಾರ ಮುಂದಾಗಿದೆ. ಹೀಗಾಗಿ ಆಧಾರ್ ಅರ್ಜಿದಾರ ಅಥವಾ ಕುಟುಂಬದವರು ಎನ್ಆರ್ಸಿಯಲ್ಲಿ ಅರ್ಜಿ ಸಲ್ಲಿಸದಿದ್ದರೆ ಅವರು ವಿಶಿಷ್ಟ ಗುರುತಿನ ಚೀಟಿ ಪಡೆಯಲು ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಸ್ಸಾಂ ಸರ್ಕಾರ ಬುಧವಾರ ತಿಳಿಸಿದೆ.
ಉದ್ವಿಗ್ನತೆ ಪೀಡಿತ ಬಾಂಗ್ಲಾದೇಶದ ನಾಗರಿಕರ ಒಳನುಸುಳುವಿಕೆ ಪ್ರಯತ್ನವನ್ನು ಗಮನದಲ್ಲಿಟ್ಟುಕೊಂಡು ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೊಲೀಸರು, ತ್ರಿಪುರಾ ಪೊಲೀಸರು ಮತ್ತು ಬಿಎಸ್ಎಫ್ ನೂರಾರು ನುಸುಳುಕೋರರನ್ನು ಬಂಧಿಸಿದೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ನುಸುಳುವಿಕೆ ನಮಗೆ ಕಳವಳಕಾರಿಯಾಗಿದೆ. ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ ಮತ್ತು ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದಿದ್ದಾರೆ.
ಇನ್ನು ಮುಂದೆ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ಆಧಾರ್ ಅರ್ಜಿದಾರರ ಪರಿಶೀಲನೆಯನ್ನು ಕೈಗೊಳ್ಳಲು ನೋಡಲ್ ಏಜೆನ್ಸಿಯಾಗಿರುತ್ತದೆ ಮತ್ತು ಪ್ರತಿ ಜಿಲ್ಲೆಯಲ್ಲಿ ಒಬ್ಬ ಹೆಚ್ಚುವರಿ ಜಿಲ್ಲಾಧಿಕಾರಿ ಸಂಬಂಧಪಟ್ಟ ವ್ಯಕ್ತಿಯಾಗಿರುತ್ತಾರೆ ಎಂದು ಸಚಿವ ಸಂಪುಟ ಸಭೆಯ ನಂತರ ಶರ್ಮಾ ಹೇಳಿದರು.
“ಆರಂಭಿಕ ಅರ್ಜಿಯ ನಂತರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಅದನ್ನು ರಾಜ್ಯ ಸರ್ಕಾರಕ್ಕೆ ಪರಿಶೀಲನೆಗಾಗಿ ಕಳುಹಿಸುತ್ತದೆ. ಸ್ಥಳೀಯ ಸರ್ಕಲ್ ಅಧಿಕಾರಿ (CO) ಮೊದಲು ಅರ್ಜಿದಾರರು ಅಥವಾ ಅವರ ಪೋಷಕರು ಅಥವಾ ಕುಟುಂಬವು NRC ಯಲ್ಲಿ ಸೇರ್ಪಡೆಗಾಗಿ ಅರ್ಜಿ ಸಲ್ಲಿಸಿದೆಯೇ ಎಂದು ಪರಿಶೀಲಿಸುತ್ತಾರೆ. ಎನ್ಆರ್ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಕೋರಿಕೆಯನ್ನು ತಕ್ಷಣವೇ ತಿರಸ್ಕರಿಸಲಾಗುವುದು ಮತ್ತು ಅದರಂತೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.