ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಅವರ ಮಾರ್ಗದರ್ಶನದಲ್ಲಿ ತಮ್ಮ ರಾಜ್ಯವನ್ನು ಅಭಿವೃದ್ಧಿಯ ಪಥಕ್ಕೆ ಕೊಂಡೊಯ್ಯುವ ಪ್ರತಿಜ್ಞೆ ಮಾಡಿದರು. ಮಹಾರಾಷ್ಟ್ರದಲ್ಲಿ ಮಹಾಯುತಿ ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಚರ್ಚೆಯೂ ನಡೆದಿದೆ ಎನ್ನಲಾಗಿದೆ.
ಡಿಸೆಂಬರ್ 5 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಫಡ್ನವಿಸ್ ಮೊದಲ ಬಾರಿಗೆ ಪ್ರಧಾನಿಯನ್ನು ಭೇಟಿ ಮಾಡಿದರು.
“ಕಳೆದ 10 ವರ್ಷಗಳಲ್ಲಿ, ನಿಮ್ಮ ಬೆಂಬಲದೊಂದಿಗೆ ಮಹಾರಾಷ್ಟ್ರವು ಪ್ರತಿಯೊಂದು ಕ್ಷೇತ್ರದಲ್ಲೂ ನಂಬರ್ 1 ಆಗಿದೆ ಮತ್ತು ಈಗ ನಿಮ್ಮ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ವಿಕಾಸದ ಈ ಪ್ರಯಾಣವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ” ಎಂದು ಫಡ್ನವಿಸ್ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಮೋದಿಯವರ ಅಮೂಲ್ಯ ಸಮಯ, ಮಾರ್ಗದರ್ಶನ, ಆಶೀರ್ವಾದ ಮತ್ತು ಮಹಾರಾಷ್ಟ್ರದ ಹಿಂದೆ ದೃಢವಾಗಿ ನಿಂತಿದ್ದಕ್ಕಾಗಿ ನಾನು ಅವರಿಗೆ ಅತ್ಯಂತ ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದರು.
ನಮ್ಮಂತಹ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಇನ್ನೂ ಹೆಚ್ಚು ಕೆಲಸ ಮಾಡಲು ಮೋದಿ ಯಾವಾಗಲೂ ಸ್ಫೂರ್ತಿಯಾಗಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.
ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯಗಳಿಸಿತ್ತು. ಬಿಜೆಪಿ-ಶಿವಸೇನೆ-ಎನ್ಸಿಪಿ ಸಮ್ಮಿಶ್ರ 230 ಸ್ಥಾನಗಳನ್ನು ಗೆದ್ದುಕೊಂಡರೆ, ಮೈತ್ರಿಕೂಟದ ಸಣ್ಣ ಸಂಘಟನೆಗಳು ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ 46 ಸ್ಥಾನಗಳಿಗೆ ಸೀಮಿತವಾಗಿತ್ತು.
ಕಳೆದ ವಾರ ಮುಂಬೈನಲ್ಲಿ ನಡೆದ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಂಡಿದ್ದರು.
Extremely thankful to Hon PM Narendra Modi ji for your valuable time, guidance, blessings and standing firm behind Maharashtra.
In last 10 years, with your support Maharashtra is Number 1 in almost every sector and now aims to take this journey of VIKAS to the next level under… pic.twitter.com/nr6pmBG5UC— Devendra Fadnavis (@Dev_Fadnavis) December 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.