ನವದೆಹಲಿ: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ 18 ರ ಹರೆಯದ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಈ ಮೂಲಕ ಅತಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಮತ್ತು ವಿಶ್ವನಾಥನ್ ಆನಂದ್ ಅವರ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಭಾರತೀಯ ಎಂಬ ಗೌರವಕ್ಕೂ ಅವರು ಪಾತ್ರರಾಗಿದ್ದಾರೆ.
ಗುಕೇಶ ಸಾಧನೆಗೆ ದೇಶವ್ಯಾಪಿಯಾಗಿ ಅಭಿನಂದನೆ, ಶ್ಲಾಘನೆಗಳು ವ್ಯಕ್ತವಾಗುತ್ತಿದೆ. ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಗುಕೇಶ್ ಸಾಧನೆಯನ್ನು ಐತಿಹಾಸಿಕ ಮತ್ತು ಅನುಕರಣೀಯ” ಎಂದಿದ್ದಾರೆ.
“ಗುಕೇಶ್ ಡಿ ಅವರ ಗಮನಾರ್ಹ ಸಾಧನೆಗಾಗಿ ಅಭಿನಂದನೆಗಳು. ಇದು ಅವರ ಅಪ್ರತಿಮ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ಅಚಲ ನಿರ್ಧಾರದ ಫಲ ಇದು. ಅವರ ವಿಜಯವು ಚೆಸ್ ಇತಿಹಾಸದಲ್ಲಿ ಅವರ ಹೆಸರನ್ನು ಅಜರಾಮರವಾಗಿಸುತ್ತದೆ. ಮಾತ್ರವಲ್ಲದೆ ಲಕ್ಷಾಂತರ ಯುವ ಮನಸ್ಸುಗಳನ್ನು ದೊಡ್ಡ ಕನಸು ಕಾಣಲು ಮತ್ತು ಶ್ರೇಷ್ಠತೆಯನ್ನು ಮುಂದುವರಿಸಲು ಪ್ರೇರೇಪಿಸುತ್ತದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದಿದ್ದಾರೆ.
Historic and exemplary!
Congratulations to Gukesh D on his remarkable accomplishment. This is the result of his unparalleled talent, hard work and unwavering determination.
His triumph has not only etched his name in the annals of chess history but has also inspired millions… https://t.co/fOqqPZLQlr pic.twitter.com/Xa1kPaiHdg
— Narendra Modi (@narendramodi) December 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.