ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) – ಹರ್ ಘರ್ ಜಲ್ ಅಡಿಯಲ್ಲಿ 15.34 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಿಗೆ ಟ್ಯಾಪ್ ವಾಟರ್ ಪೂರೈಕೆಯ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ದೇಶದಲ್ಲಿ 19.35 ಕೋಟಿ ಗ್ರಾಮೀಣ ಕುಟುಂಬಗಳಿವೆ ಮತ್ತು ಈ ಪೈಕಿ ಇಲ್ಲಿಯವರೆಗೆ 79.28 ಪ್ರತಿಶತದಷ್ಟು ಜಲ ಜೀವನ್ ಮಿಷನ್ (ಜೆಜೆಎಂ) ವ್ಯಾಪ್ತಿಗೆ ಒಳಪಟ್ಟಿವೆ. ನಲ್ಲಿ ನೀರು ಪೂರೈಕೆಯಾಗುತ್ತಿದೆ ಎಂದಿದ್ದಾರೆ.
ಆಗಸ್ಟ್ 2019 ರಲ್ಲಿ ಜಲ ಜೀವನ್ ಮಿಷನ್ ಪ್ರಾರಂಭದಲ್ಲಿ ಕೇವಲ 3.23 ಕೋಟಿ ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು ಎಂದು ವರದಿಯಾಗಿದೆ ಆದರೆ ಪ್ರಸ್ತುತ ಅದು ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದೆ ಎಂದು ಸೋಮಣ್ಣ ಹೇಳಿದರು.
ಭಾರತ ಸರ್ಕಾರದ ಜಲ ಶಕ್ತಿ ಸಚಿವಾಲಯವು 2019 ರಲ್ಲಿ ಜಲ ಜೀವನ್ ಮಿಷನ್ ಅನ್ನು ಪ್ರಾರಂಭಿಸಿದ್ದು, ಪ್ರತಿ ಗ್ರಾಮೀಣ ಮನೆಗಳಿಗೆ ಪ್ರತಿ ದಿನಕ್ಕೆ ನಿಯಮಿತವಾಗಿ 55 ಲೀಟರ್ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.