ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಏಳು ಮಾವೋವಾದಿಗಳನ್ನು ಸಂಹರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆಗೈದಿದ್ದಾರೆ.
ದಾಂತೇವಾಡ-ನಾರಾಯಣಪುರ ಗಡಿಯ ಸಮೀಪ ದಕ್ಷಿಣ ಅಬುಜ್ಮದ್ನ ದಟ್ಟ ಅರಣ್ಯದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಎನ್ಕೌಂಟರ್ ಆರಂಭವಾಯಿತು. ಗುಂಡಿನ ಚಕಮಕಿಯ ನಂತರ, ಭದ್ರತಾ ಪಡೆಗಳು ಸಮವಸ್ತ್ರದಲ್ಲಿದ್ದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಸಿಬ್ಬಂದಿ ಮತ್ತು ಸಿಆರ್ಪಿಎಫ್ ತಂಡಗಳು ಭಾಗವಹಿಸಿದ್ದವು.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ, ಕಾರ್ಯಾಚರಣೆ ಮುಗಿದ ನಂತರ ಹೆಚ್ಚುವರಿ ವಿವರಗಳನ್ನು ಒದಗಿಸಲಾಗುವುದು ಎಂದು ಐ ಜಿ ಬಸ್ತಾರ್ ಪಿ ಸುಂದರರಾಜ್ ಹೇಳಿದ್ದಾರೆ.
ಭದ್ರತಾ ಪಡೆಗಳ ಶೌರ್ಯವನ್ನು ಶ್ಲಾಘಿಸಿದ ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, “ಇದು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು, ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಭದ್ರತಾ ಅಧಿಕಾರಿಗಳು ಮತ್ತು ಸೈನಿಕರನ್ನು ಅವರ ಧೈರ್ಯಕ್ಕಾಗಿ ನಾನು ಅಭಿನಂದಿಸುತ್ತೇನೆ. ನಮ್ಮ ಹೋರಾಟವು ಮುಂದುವರಿಯುತ್ತದೆ. ನಕ್ಸಲಿಸಂ ನಿರ್ಮೂಲನೆಯಾಗಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.