ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ಆಡಳಿತ ಮತ್ತು ಪೊಲೀಸರು ಅತಿಕ್ರಮಣ ಮಾಡಲಾಗಿದೆ ಎನ್ನಲಾದ ದೇವಸ್ಥಾನವೊಂದನ್ನು ಪತ್ತೆ ಮಾಡಿದ್ದು, ಈ ದೇವಾಲಯದಲ್ಲಿ ಶಿವ ದೇವರು ಮತ್ತು ಹನುಮಂತನ ವಿಗ್ರಹಗಳು ಕಂಡುಬಂದಿವೆ. ಯೋಗಿ ಆದಿತ್ಯನಾಥ ಸರ್ಕಾರ ನಡೆಸಿದ ಅತಿಕ್ರಮಣ ನಿರ್ಮೂಲನಾ ಅಭಿಯಾನದ ವೇಳೆ ಈ ದೇಗುಲ ಪತ್ತೆಯಾಗಿದೆ.
ಸಂಭಾಲ್ ಸಿಒ ಅನುಜ್ ಕುಮಾರ್ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿ, ಪ್ರದೇಶದಲ್ಲಿ ದೇವಸ್ಥಾನವನ್ನು ಅತಿಕ್ರಮಣ ಮಾಡಿದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ನಾವು ಸ್ಥಳವನ್ನು ಪರಿಶೀಲಿಸಿದಾಗ, ಅಲ್ಲಿ ಒಂದು ದೇವಸ್ಥಾನವನ್ನು ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ಹೆಚ್ಚುವರಿ ಎಸ್ಪಿ ಶ್ರೀಶ್ಚಂದ್ರ ಮಾತನಾಡಿ, ‘ಕೆಲವರು ಮನೆ ನಿರ್ಮಿಸಿ ದೇವಸ್ಥಾನವನ್ನು ಒತ್ತುವರಿ ಮಾಡಿಕೊಂಡಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದ್ದು, ದೇವಸ್ಥಾನವನ್ನು ಸ್ವಚ್ಛಗೊಳಿಸಲಾಗಿದ್ದು, ದೇವಸ್ಥಾನವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.
“ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳಿವೆ. ಈ ಪ್ರದೇಶದಲ್ಲಿ ಹಿಂದೂ ಕುಟುಂಬಗಳು ವಾಸವಿದ್ದವು ಮತ್ತು ಕಾರಣಾಂತರಗಳಿಂದ ಅವರು ಈ ಪ್ರದೇಶವನ್ನು ತೊರೆದರು. ದೇವಾಲಯದ ಸಮೀಪದಲ್ಲಿಯೇ ಪುರಾತನ ಬಾವಿ ಇದ್ದ ಬಗ್ಗೆಯೂ ಮಾಹಿತಿ ಇದೆ” ಎಂದು ಅಧಿಕಾರಿ ಹೇಳಿದ್ದಾರೆ.
ವಿಶೇಷವಾಗಿ ಮಸೀದಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿಗಳ ಉದ್ದಕ್ಕೂ ಅತಿಕ್ರಮಣಗಳು ನಡೆಯುತ್ತಿದ್ದು, ಇದು ಆತಂಕ ಸೃಷ್ಟಿಸಿದೆ. ಜಿಲ್ಲಾಡಳಿತವು ಶುಕ್ರವಾರ ಚಂಡೌಸಿ ನಗರದಲ್ಲಿ ಅತಿಕ್ರಮಣ ನಿರ್ಮೂಲನಾ ಅಭಿಯಾನವನ್ನು ಪ್ರಾರಂಭಿಸಿದ್ದು, ಅದನ್ನು ಸಂಭಾಲ್ನ ಇತರ ಭಾಗಗಳಿಗೆ ವಿಸ್ತರಿಸಲಾಗುತ್ತಿದೆ.
“ಎರಡರಿಂದ ಮೂರು ತಿಂಗಳವರೆಗೆ ಅಭಿಯಾನ ಮುಂದುವರಿಯುತ್ತದೆ ಮತ್ತು ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸಲಾಗುವುದು” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.