ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ ಎಂದು ಸುಪ್ರೀಂಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನೆ ಮಾಡಿದೆ.
ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.
ಮಸೀದಿ ಆವರಣದಲ್ಲಿ ಜೈ ಶ್ರೀಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈದರ್ ಅಲಿ ಸಿ. ಎಂ. ಅವರು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಯಿತು ಎಂದು ದೂರುದಾರರನ್ನು ಪ್ರಶ್ನಿಸಿದೆ.
ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಪ್ರಶ್ನಿಸಿತು.
ಅಂತಿಮವಾಗಿ ದೂರುದಾರರು ಸಲ್ಲಿಸಿದ ಮೇಲ್ಮನವಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ನೀಡುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿ ತಿಂಗಳಿನಲ್ಲಿ ನಡೆಸುವುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.