ಪಾಟ್ನಾ: ಬಿಹಾರದಲ್ಲಿ ಸೋಮವಾರ ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭಿಸಲಾಗಿದೆ.
ಇಂದು 10 ಜಿಲ್ಲೆಗಳ 49 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 13.5 ಮಿಲಿಯನ್ ಮತದಾರರು 586 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಚುನಾವಣೆಯ ಮೇಲೆ ಹದ್ದಿನ ಕಣ್ಣಿಡಲು ಇದೇ ಮೊದಲ ಬಾರಿಗೆ ದ್ರೋನ್ಗಳನ್ನು ಬಳಕೆ ಮಾಡಲಾಗುತ್ತಿದೆ. 1.20ಲಕ್ಷ ಭದ್ರತಾ ಅಧಿಕಾರಿಗಳು, 87,600ಕೇಂದ್ರ ಅರೆಸೇನಾ ಸಿಬ್ಬಂದಿಗಳನ್ನು 13,212 ಮತಕೇಂದ್ರಗಳಲ್ಲಿ ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಬಿಹಾರದ ಎಲ್ಲಾ ಜನತೆ ಅತ್ಯಧಿಕ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
243 ವಿಧಾನಸಭಾ ಸ್ಥಾನಗಳಿರುವ ಬಿಹಾರದಲ್ಲಿ ಒಟ್ಟು ಐದು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 5ಕ್ಕೆ ಚುನಾವಣೆ ಕೊನೆಯಾಗಲಿದ್ದು, ಮತ ಎಣಿಕೆ ನವೆಂಬರ್ 8ಕ್ಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.