ನವದೆಹಲಿ: ಖ್ಯಾತ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗುತ್ತಿದ್ದಂತೆಯೇ ಅಶ್ವಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಟೆಸ್ಟ್ ಮಾತ್ರವಲ್ಲದೆ ಏಕದಿನ ಹಾಗೂ ಟಿ20 ಕ್ರಿಕೆಟ್ಗೂ ಅಶ್ವಿನ್ ವಿದಾಯ ಹೇಳಿದ್ದಾರೆ.
ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರು ಎನಿಸಿರುವ ರವಿಚಂದ್ರನ್ ಅಶ್ವಿನ್, ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಬೇಸರ ತರಿಸಿದ್ದಾರೆ. ಒಟ್ಟು 106 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು 537 ವಿಕೆಟ್ಗಳನ್ನು ಕಬಳಿಸುವುದರೊಂದಿಗೆ 3503 ರನ್ ಕಲೆ ಹಾಕಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಭಾರತದ ಪ್ರಮುಖ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4 ನೇ ಟೆಸ್ಟ್ ಪಂದ್ಯ ಡ್ರಾ ಆದ ಬೆನ್ನಲ್ಲೇ, 38 ವರ್ಷದ ಅಶ್ವಿನ್ ತಮ್ಮ ನಿರ್ಧಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ಟ್ವಿಟ್ ಮಾಡಿರುವ ಬಿಸಿಸಿಐ, “ಧನ್ಯವಾದಗಳು ಅಶ್ವಿನ್. ಪಾಂಡಿತ್ಯ, ಮಾಂತ್ರಿಕತೆ, ತೇಜಸ್ಸು ಮತ್ತು ನಾವೀನ್ಯತೆಗೆ ಸಮಾನಾರ್ಥಕವಾದ ಹೆಸರು. ಏಸ್ ಸ್ಪಿನ್ನರ್ ಮತ್ತು ಟೀಮ್ ಇಂಡಿಯಾದ ಅಮೂಲ್ಯ ಆಲ್-ರೌಂಡರ್ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಭೂತಪೂರ್ವ ವೃತ್ತಿಜೀವನಕ್ಕೆ ಅಭಿನಂದನೆಗಳು” ಎಂದಿದೆ.
Ravichandran Ashwin announces his retirement from all forms of international cricket.
Congratulations on a brilliant career 👏 pic.twitter.com/UHWAFmMwC0
— 7Cricket (@7Cricket) December 18, 2024
𝙏𝙝𝙖𝙣𝙠 𝙔𝙤𝙪 𝘼𝙨𝙝𝙬𝙞𝙣 🫡
A name synonymous with mastery, wizardry, brilliance, and innovation 👏👏
The ace spinner and #TeamIndia's invaluable all-rounder announces his retirement from international cricket.
Congratulations on a legendary career, @ashwinravi99 ❤️ pic.twitter.com/swSwcP3QXA
— BCCI (@BCCI) December 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.