ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ದಲಿತ ನಾಯಕ ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಪ್ರಧಾನಿ ನರೇಂದ್ರ ಮೋದಿ, ಬಿಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಅವಮಾನಿಸಲು ಕಾಂಗ್ರೆಸ್ ಹೇಗೆ ಸಾಧ್ಯವಿರುವ ಎಲ್ಲ ತಂತ್ರಗಳನ್ನು ಅನುಸರಿಸಿತು ಎಂಬುದನ್ನು ಜನರು ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ದುರುದ್ದೇಶಪೂರಿತ ಸುಳ್ಳುಗಳು ಕಾಂಗ್ರೆಸ್ ಮತ್ತು ಅದರ ಕೊಳೆತ ಪರಿಸರ ವ್ಯವಸ್ಥೆ ಸಂವಿಧಾನದ ಶಿಲ್ಪಿಗೆ ಮಾಡಿದ ಅವಮಾನವನ್ನು ಮರೆಮಾಡುತ್ತದೆ ಎಂದು ಭಾವಿಸಿದರೆ ಅದು ಗಂಭೀರವಾದ ತಪ್ಪಾಗುತ್ತದೆ ಎಂದು ಹೇಳಿದ್ದಾರೆ.
“ಕಾಂಗ್ರೆಸ್ ಮತ್ತು ಅದರ ಕೊಳೆತ ಪರಿಸರ ವ್ಯವಸ್ಥೆಯು ತಮ್ಮ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳು ಅದರಲ್ಲೂ ವಿಶೇಷವಾಗಿ ಡಾ. ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಮರೆಮಾಡಬಹುದು ಎಂದು ಭಾವಿಸಿದರೆ, ಅವರ ಭಾವನೆ ತಪ್ಪು! ಒಂದು ವಂಶದ ನೇತೃತ್ವದ ಪಕ್ಷವು ಡಾ. ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ಎಸ್ಸಿ/ಎಸ್ಟಿಯನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ತೊಡಗಿದ್ದನ್ನು ಭಾರತದ ಜನರು ನೋಡಿದ್ದಾರೆ” ಎಂದು ಪ್ರಧಾನಿ ಹೇಳಿದ್ದಾರೆ.
“ಡಾ. ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ಮಾಡಿದ ಪಾಪಗಳ ಪಟ್ಟಿ ನೀಡಿರುವ ಮೋದಿ, ಅವರನ್ನು ಒಂದಲ್ಲ ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಲಾಗಿದೆ. ಪಂಡಿತ್ ನೆಹರೂ ಅವರು ಅಂಬೇಡ್ಕರ್ ವಿರುದ್ಧ ಪ್ರಚಾರ ಮಾಡಿ ಅವರ ಸೋಲನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಂಡರು. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ನಿರಾಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಅವರ ಭಾವಚಿತ್ರಕ್ಕೆ ಹೆಮ್ಮೆಯ ಸ್ಥಾನವನ್ನು ನೀಡುವುದನ್ನು ನಿರಾಕರಿಸಲಾಯಿತು” ಎಂದಿದ್ದಾರೆ.
If the Congress and its rotten ecosystem think their malicious lies can hide their misdeeds of several years, especially their insult towards Dr. Ambedkar, they are gravely mistaken!
The people of India have seen time and again how one Party, led by one dynasty, has indulged in…
— Narendra Modi (@narendramodi) December 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.