ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಭಾರೀ ಗದ್ದಲವನ್ನೇ ಸೃಷ್ಟಿಸಿವೆ. ಇನ್ನೊಂದೆಡೆ ಬಿಜೆಪಿ ಕೂಡ ಕಾಂಗ್ರೆಸ್ ಅಂಬೇಡ್ಕರ್ಗೆ ಮಾಡಿದ ಅವಮಾನಗಳನ್ನು ಬಹಿರಂಗಪಡಿಸಿ ಪ್ರತಿಭಟಿಸುತ್ತಿದೆ.
ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ನ ಸದಸ್ಯರು ಇಂದು ನೀಲಿ ಬಣ್ಣದ ಬಟ್ಟೆಯನ್ನು ಧರಿಸಿ ಸಂಸತ್ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂಡಿ ಕೂಟಕ್ಕೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರು ಅಂಬೇಡ್ಕರ್ ಅವರನ್ನು ಅವಮಾನಿಸಿದ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ, ನಾಮಫಲಕಗಳನ್ನು ಹಿಡಿದು ಸಂಸತ್ತಿನ ಆವರಣದೊಳಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರನ್ನು ನೂಕಿದ್ದು ಅವರ ತಲೆಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಬಿಜೆಪಿ ಸಂಸದ ಮುಖೇಶ್ ರಜಪೂತ್ ಕೂಡ ಗಾಯಗೊಂಡಿದ್ದಾರೆ. ಅವರನ್ನು ಆರ್ಎಂಎಲ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವು ಸಂಸದರಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಈ ಕೃತ್ಯವನ್ನು ಬಿಜೆಪಿ ಬಲವಾಗಿ ಖಂಡಿಸಿದ್ದು, ರಾಹುಲ್ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನನ್ನನ್ನು ತಳ್ಳಿದರು ಎಂದು ಸಂಸದ ಸಾರಂಗಿ ಅವರು ಆರೋಪಿಸಿದ್ದಾರೆ. ಆದರೆ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ ನಾನು ತಳ್ಳಿಲ್ಲ ಎಂದು ಹೇಳಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಹುಲ್ ವಿರುದ್ಧ ಪೊಲೀಸ್ ದೂರು ದಾಖಲಿಸಲು ಮುಂದಾಗಿದೆ.
Look at the arrogance of the Gandhi scion.
Instead of aplogising for injuring an aged BJP MP, Shri Pratap Sarangi, Rahul Gandhi walks away with accusations.
So much for being mohabbat ki dukan.
Such entitlement!
Congress continues to be blot on democracy. pic.twitter.com/a2k9rAUbSU
— Bhupender Yadav (@byadavbjp) December 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.