ಬೈಂದೂರು: ಡಿಎಂಬರ್ 26 ರಂದು ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ತಹಸೀಲ್ದಾರ್ ಜೊತೆಗೆ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿ ಹೊಳೆಯವರು ಸಭೆ ನಡೆಸಿದರು.
ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿ ನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ ಹಕ್ಕು ಪತ್ರ ದೊರಕದೇ ಇರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ಸಭೆಯಲ್ಲಿ ಶಾಸಕರು ಮನವಿ ಮಾಡಿದರು.
ಜನವರಿ 2 ನೇ ವಾರದಲ್ಲಿ ಕಡತ ವಿಲೇವಾರಿ ಸಪ್ತಾಹ ಆಯೋಜಿಸಿ ಬಾಕಿ ಇರುವ ಶೂನ್ಯ ಸಮಸ್ಯಾತ್ಮಕ ಎಲ್ಲಾ ಅರ್ಹ ಕಡತಗಳನ್ನು ವಿಲೇ ಗೊಳಿಸಿ ಹಕ್ಕು ಪತ್ರ ಒದಗಿಸಲು ಕ್ರಮ ವಹಿಸುವಂತೆ ಹಾಗೂ ಜನವರಿ ತಿಂಗಳ ಅಂತ್ಯದೊಳಗೆ ಎಲ್ಲಾ ಸಮಸ್ಯೆತರ ಕಡತಗಳನ್ನು ವಿಲೇವಾರಿ ಮಾಡಿ ರೈತರಿಗೆ ಹಕ್ಕು ಪತ್ರ ಒದಗಿಸುವಂತೆ ಸೂಚಿಸಿದರು. ಜನವರಿ ಅಂತ್ಯಕ್ಕೆ ಸಮಸ್ಯಾತ್ಮಕವಲ್ಲದ ಯಾವುದೇ ಕಡತ ಗಳು ಬಾಕಿ ಇರ ಕೂಡದು.ಈ ಬಗ್ಗೆ ಕಂದಾಯ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಗಳು, ಕಂದಾಯ ನಿರೀಕ್ಷಕರು, ವಿಷಯ ನಿರ್ವಾಹಕರು ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.