ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ ತೋರುತ್ತಿರುವ ವಿಳಂಬ ಧೋರಣೆಯ ವಿರುದ್ಧ ಮನವಿ ಸಲ್ಲಿಸಲು ಇಂದು ಭಾರತೀಯ ಮಜ್ದೂರ್ ಸಂಘದ ಸಂಯೋಜನೆಗೊಂಡಿರುವ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದ ನಿಯೋಗ ರಾಜ್ಯಪಾಲರಾದ ತಾವರ್ ಚಾಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು.
ಮಜ್ದೂರ್ ಸಂಘದ ರಾಜ್ಯಾಧ್ಯಕ್ಷರಾದ ಎನ್.ಕೆ ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ಅಧ್ಯಕ್ಷರಾದ ಆದ ಎಚ್.ಎಲ್. ವಿಶ್ವನಾಥ್ ಹಾಗೂ ಗಂಗಾಧರ ಗಾಣಿಗೇರ್ ಮತ್ತು ಮುನಿಸ್ವಾಮಿ ರಾಹುಲ್ ಅವರನ್ನು ಒಳಗೊಂಡ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ ಕೂಡಲೇ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಮಸ್ಯೆಗಳ ಈಡೇರಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ರಾಜ್ಯಪಾಲರು ನಿಯೋಗದೊಂದಿಗೆ ಚರ್ಚಿಸಿ ಎಲ್ಲಾ ಮಾಹಿತಿಯನ್ನು ಪಡೆದು ನಂತರ ಈ ವಿಷಯದ ಬಗ್ಗೆ ಸರ್ಕಾರಕ್ಕೆ ತಕ್ಷಣ ಪತ್ರ ಬರೆದು ಸಮಸ್ಯೆಯನ್ನು ಈಡೇರಿಸಲು ಸೂಚಿಸಲಾಗುವುದು ಎಂದು ನಿಯೋಗಕ್ಕೆ ಆಶ್ವಾಸನೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.