ನವದೆಹಲಿ: ಪ್ಯಾರಿಸ್ನಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರೀಯ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಜನವರಿ 17 ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನಾಲ್ವರು ಅಥ್ಲೀಟ್ಗಳಿಗೆ ಪ್ರದಾನಿಸಲಾಗುತ್ತದೆ ಎಂದು ಕ್ರೀಡಾ ಸಚಿವಾಲಯ ಇಂದು ತಿಳಿಸಿದೆ. ಮನು ಅವರ ಹೆಸರು ಆರಂಭದಲ್ಲಿ ಪಟ್ಟಿಯಿಂದ ಕಾಣೆಯಾಗಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡರು.
ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರು ಕೂಡ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
“ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ, ಈ ಕೆಳಗಿನ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.