ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಅವರು ಜೆಜೆ ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಸುಮಾರು 1700 ಫ್ಲಾಟ್ಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ರಾಜಧಾನಿಯ ಅಶೋಕ್ ವಿಹಾರ್ನಲ್ಲಿ ಅರ್ಹ ಫಲಾನುಭವಿಗಳಿಗೆ ಕೀಲಿಗಳನ್ನು ಹಸ್ತಾಂತರಿಸಿದರು.
ಈ ವೇಳೆ ಮೋದಿ ಫ್ಲಾಟ್ ಪಡೆದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಹೊಸದಾಗಿ ಮಂಜೂರು ಮಾಡಿದ ಫ್ಲ್ಯಾಟ್ಗಳನ್ನು ಪರಿಶೀಲಿಸಿದರು. ಹೊಸದಾಗಿ ನಿರ್ಮಿಸಲಾದ ಫ್ಲಾಟ್ಗಳ ಉದ್ಘಾಟನೆಯು ದೆಹಲಿ ಅಭಿವೃದ್ಧಿ ಪ್ರಾಧಿಕಾರದಿಂದ ಎರಡನೇ ಯಶಸ್ವಿ ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯನ್ನು ಪೂರ್ಣಗೊಳಿಸುವುದನ್ನು ಸೂಚಿಸುತ್ತದೆ. ಈ ಯೋಜನೆಯು ಜೆಜೆ ಕ್ಲಸ್ಟರ್ಗಳ ನಿವಾಸಿಗಳಿಗೆ ಸರಿಯಾದ ಸೌಕರ್ಯಗಳು ಮತ್ತು ಸೌಲಭ್ಯಗಳೊಂದಿಗೆ ಉತ್ತಮ ಮತ್ತು ಆರೋಗ್ಯಕರ ಜೀವನ ಪರಿಸರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಎರಡು ನಗರ ಪುನರಾಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
ಅಲ್ಲದೆ, ದ್ವಾರಕಾದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ನ ಇಂಟಿಗ್ರೇಟೆಡ್ ಆಫೀಸ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ ಉದ್ಘಾಟಿಸಿದರು. ಇದು ಕಚೇರಿಗಳು, ಸಭಾಂಗಣ, ಸುಧಾರಿತ ದತ್ತಾಂಶ ಕೇಂದ್ರ, ಸಮಗ್ರ ನೀರು ನಿರ್ವಹಣಾ ವ್ಯವಸ್ಥೆ ಇತ್ಯಾದಿಗಳನ್ನು ಒಳಗೊಂಡಿದೆ. ದೆಹಲಿ ವಿಶ್ವವಿದ್ಯಾನಿಲಯದಲ್ಲಿ 600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮೂರು ಹೊಸ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದರು. ಅವರು ಪೂರ್ವ ದೆಹಲಿಯ ಸೂರಜ್ಮಲ್ ವಿಹಾರ್ನಲ್ಲಿ ಪೂರ್ವ ಕ್ಯಾಂಪಸ್ನಲ್ಲಿ ಶೈಕ್ಷಣಿಕ ಬ್ಲಾಕ್ಗೆ ಮತ್ತು ದ್ವಾರಕಾದಲ್ಲಿ ಪಶ್ಚಿಮ ಕ್ಯಾಂಪಸ್ನಲ್ಲಿ ಶೈಕ್ಷಣಿಕ ಬ್ಲಾಕ್ಗೆ ಅಡಿಪಾಯ ಹಾಕಿದರು. ನಜಾಫ್ಗಢದ ರೋಶನ್ಪುರದಲ್ಲಿ ವೀರ್ ಸಾವರ್ಕರ್ ಕಾಲೇಜಿಗೆ ಶಂಕುಸ್ಥಾಪನೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.