ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ 22.18 ಕೋಟಿ ರೂ. ಅಂದಾಜು ಮೊತ್ತದ ಮೂಲ ಸೌಕರ್ಯ ಕಾಮಗಾರಿಗಳಿಗೆ ಕೇಂದ್ರದ ಅನುಮೋದನೆ ಆಗಿದ್ದು ರಾಜ್ಯ ಸರ್ಕಾರದ ಆಡಳಿತ ಅನೋಮೋದನೆ ಬಾಕಿ ಇತ್ತು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನ ಮಂಡಲದ ಅಧಿವೇಶನ ದಲ್ಲಿ ಸದನದ ಗಮನ ಸೆಳೆದು ರಾಜ್ಯ ಸರಕಾರದಿಂದ ಕೂಡಲೇ ಆಡಳಿತ ಅನುಮೋದನೆ ನೀಡುವಂತೆ ಆಗ್ರಹಿಸಿದ್ದರು.
ಅದರಂತೆ ರಾಜ್ಯ ಸರ್ಕಾರ ಆಡಳಿತ ಅನುಮೋದನೆ ನೀಡಲು ಒಪ್ಪಿದೆ ಎಂದು ಶಾಸಕ ಕಚೇರಿ ಪ್ರಕಟನೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.