ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡಿದೆ.
ದೆಹಲಿ ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಫೆಬ್ರವರಿ 5 ರಂದು ಮತ ಚಲಾಯಿಸಲಿದೆ ಮತ್ತು ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದೆ.
ಪ್ರಸ್ತುತ ದೆಹಲಿಯಲ್ಲಿ ಆತಿಶಿ ನೇತೃತ್ವದ ಎಎಪಿ ಸರ್ಕಾರವಿದೆ. ಅರವಿಂದ್ ಕೇಜ್ರಿವಾಲ್ ಜೈಲಿಗೆ ಹೋಗಿಬಂದ ತರುವಾಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯನ್ನು ನೀಡಿ ಆತಿಶಿ ಅವರನ್ನು ತನ್ನ ಸ್ಥಾನಕ್ಕೆ ನೇಮಿಸಿದ್ದಾರೆ. ಆದರೆ ಚುನಾವಣೆಯನ್ನು ಎಎಪಿ ಪಕ್ಷ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ನಡೆಸಲು ಸಜ್ಜಾಗಿದೆ.
ಇನ್ನೊಂದೆಡೆ ಇಂಡಿ ಒಕ್ಕೂಟ ಭಾಗವಾಗಿದ್ದರೂ ಕೂಡ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯನ್ನು ಪ್ರತ್ಯೇಕವಾಗಿಯೇ ಎದುರಿಸಲು ನಿರ್ಧರಿಸಿವೆ. ಹೀಗಾಗಿ ಮೂರು ಪಕ್ಷಗಳು ಚುನಾವಣೆಯಲ್ಲಿ ತಮ್ಮ ಬಲ ಪರೀಕ್ಷೆಯನ್ನು ನಡೆಸಲಿವೆ.
ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದ ಜಾರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.