ಆಗ್ರಾ: ಟಿಬೆಟ್ನ ಬ್ರಹ್ಮಪುತ್ರ ನದಿಗೆ ಭಾರತದ ಗಡಿಗೆ ಸಮೀಪದಲ್ಲಿ ಮೆಗಾ ಅಣೆಕಟ್ಟು ನಿರ್ಮಿಸುವ ಚೀನಾದ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಎಚ್ಚರಿಕೆಯಿಂದ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.
ಬ್ರಹ್ಮಪುತ್ರದ ಮೇಲೆ ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಚೀನಾ ಘೋಷಿಸಿದ ಕೆಲವೇ ದಿನಗಳಲ್ಲಿ, ಭಾರತವು ತನ್ನ ಹಿತಾಸಕ್ತಿಗಳನ್ನು ರಕ್ಷಿಸಲು ಮೇಲ್ವಿಚಾರಣೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ ಹೇಳಿದೆ.
ಅಪ್ಸ್ಟ್ರೀಮ್ ಪ್ರದೇಶಗಳಲ್ಲಿನ ಚಟುವಟಿಕೆಗಳಿಂದ ಬ್ರಹ್ಮಪುತ್ರದ ಕೆಳಹಂತದ ರಾಜ್ಯಗಳ ಹಿತಾಸಕ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಚೀನಾಗೆ ಭಾರತ ಒತ್ತಾಯಿಸಿದೆ.
ಅಣೆಕಟ್ಟಿನ ಬಗ್ಗೆ ಕೇಳಿದಾಗ “ಭಾರತ ಸರ್ಕಾರವು ಅಲರ್ಟ್ ಆಗಿದೆ” ಎಂದು ರಕ್ಷಣಾ ಸಚಿವರು ಕಾರ್ಯಕ್ರಮವೊಂದರಲ್ಲಿ ಹೇಳಿದರು.
ನಗರದ ಮುಫೀದ್-ಎ-ಆಮ್ ಇಂಟರ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಕ ಸಂಘದ 57ನೇ ರಾಜ್ಯ ಮಟ್ಟದ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಿಂಗ್ ಆಗ್ರಾಕ್ಕೆ ಬಂದಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಅವರನ್ನು ವಿದ್ಯಾರ್ಥಿಗಳು ಸರಸ್ವತಿ ವಂದನೆಯೊಂದಿಗೆ ಸ್ವಾಗತಿಸಿದರು.
ಕಾರ್ಯಕ್ರಮಕ್ಕೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “ಹಿಂದೆ, ಭಾರತವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಾತನಾಡಿದಾಗ ಜನರು ಅದನ್ನು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ, ಆದರೆ ಈಗ ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ” ಎಂದು ಹೇಳಿದರು.
“ಇತ್ತೀಚಿನ ದಿನಗಳಲ್ಲಿ ಭಾರತವು ಪ್ರತಿಯೊಂದು ಅಂಶದಲ್ಲೂ ಪ್ರಗತಿಯಲ್ಲಿದೆ. ಮೊದಲು ಆರ್ಥಿಕತೆಯು 11 ನೇ ಸ್ಥಾನದಲ್ಲಿತ್ತು ಈಗ ಭಾರತೀಯ ಆರ್ಥಿಕತೆಯು ಐದನೇ ಸ್ಥಾನದಲ್ಲಿದೆ ಮತ್ತು ಮುಂಬರುವ ಎರಡೂವರೆ ವರ್ಷಗಳಲ್ಲಿ ಇದು ಮೊದಲ ಮೂರು ರಾಷ್ಟ್ರಗಳಲ್ಲಿ ಒಂದಾಗಲಿದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.