ನವದೆಹಲಿ: 2024 ರಲ್ಲಿ ರಸ್ತೆ ಅಪಘಾತಗಳಿಂದ ಸುಮಾರು 1.80 ಲಕ್ಷ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ
ನಿನ್ನೆ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರೊಂದಿಗೆ ರಸ್ತೆ ಸುರಕ್ಷತೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಹೆಲ್ಮೆಟ್ ಧರಿಸದ ಕಾರಣ ಸುಮಾರು 30 ಸಾವಿರ ಜನರು ಸಾವನ್ನಪ್ಪಿದ್ದಾರೆ. 66 ರಷ್ಟು ಸಾವುಗಳು 18 ರಿಂದ 34 ರ ವಯೋಮಾನದವರಲ್ಲಿ ಸಂಭವಿಸಿವೆ ಎಂದು ಅವರು ಮಾಹಿತಿ ನೀಡಿದರು.
ಶಾಲಾ-ಕಾಲೇಜುಗಳ ಮುಂಭಾಗದ ನಿರ್ಗಮನ-ಪ್ರವೇಶ ಸ್ಥಳದಲ್ಲಿ ಸರಿಯಾದ ವ್ಯವಸ್ಥೆಗಳ ಕೊರತೆಯಿಂದಾಗಿ ಸುಮಾರು 10,000 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಡ್ಕರಿ ಹೇಳಿದರು.
ಅಲ್ಲದೇ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಅವರು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ರಸ್ತೆ ಅಪಘಾತ ಸಂತ್ರಸ್ತರಿಗೆ ಏಳು ದಿನಗಳ 1.5 ಲಕ್ಷ ರೂವರೆಗಿನ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸುತ್ತದೆ. ಅಪಘಾತದ ಬಗ್ಗೆ 24 ಗಂಟೆಗಳ ಒಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಗಡ್ಕರಿ ಹೇಳಿದ್ದಾರೆ.
ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸಚಿವರು ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.