ನವದೆಹಲಿ: ಇಂಡಿ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಸ್ಪಷ್ಟತೆ ಇಲ್ಲ. ಕಳೆದ ವರ್ಷ ಸಂಸತ್ ಚುನಾವಣೆಗಾಗಿಯೇ ರಚನೆಯಾಗಿದ್ದ ವಿರೋಧ ಪಕ್ಷಗಳ ಈ ಕೂಟವನ್ನು ವಿಸರ್ಜಿಸಬೇಕಾಗುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂದು ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಕುರಿತಾದ ಪ್ರಶ್ನೆಗೆ ನ್ಯಾಷನಲ್ ಕಾನ್ಫರೆನ್ಸ್ ನಾಯಕನೂ ಆಗಿರುವ ಒಮರ್ ಅಬ್ದುಲ್ಲಾ ಈ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ. ಎಎಪಿ ಮತ್ತು ಕಾಂಗ್ರೆಸ್ ತಿಂಗಳುಗಳ ಹಿಂದೆ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದವು, ಆದರೆ ವಿಧಾನಸಭಾ ಚುನಾವಣೆಗೆ ಮೈತ್ರಿ ಮುರಿದುಕೊಂಡಿವೆ.
“ದೆಹಲಿ ಚುನಾವಣೆಗಳೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲದ ಕಾರಣ ನಾನು ಇದರ ಬಗ್ಗೆ ಏನನ್ನೂ ಹೇಳಲಾರೆ. ಎಎಪಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬಿಜೆಪಿಯನ್ನು ಹೇಗೆ ಎದುರಿಸಬೇಕೆಂದು ನಿರ್ಧರಿಸಬೇಕು. ನನಗೆ ನೆನಪಿರುವಂತೆ, ಇಂಡಿ ಮೈತ್ರಿಕೂಟಕ್ಕೆ ಯಾವುದೇ ಸಮಯ ಮಿತಿ ಇರಲಿಲ್ಲ. ದುರದೃಷ್ಟವಶಾತ್, ಇಂಡಿ ಮೈತ್ರಿಕೂಟದ ಯಾವುದೇ ಸಭೆಯನ್ನು ಆಯೋಜಿಸಲಾಗುತ್ತಿಲ್ಲ, ಆದ್ದರಿಂದ ನಾಯಕತ್ವ, ಕಾರ್ಯಸೂಚಿ ಅಥವಾ ಇಂಡಿ ಕೂಟದ ಅಸ್ತಿತ್ವದ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ ಚುನಾವಣೆಗಾಗಿ ಮಾತ್ರ ಮೈತ್ರಿಕೂಟವಾಗಿದ್ದರೆ ಅವರು ಮೈತ್ರಿಕೂಟವನ್ನು ಮುಕ್ತಾಯಗೊಳಿಸಬೇಕು” ಎಂದಿದ್ದಾರೆ.
ಕಳೆದ ಕೆಲವು ವಾರಗಳಿಂದ, ದೆಹಲಿ ಚುನಾವಣೆಯ ಪ್ರಚಾರದಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಭ್ರಷ್ಟಾಚಾರ ಮತ್ತು ಕಳಪೆ ಆಡಳಿತದ ಆರೋಪ ಮಾಡುತ್ತಿದ್ದರೆ, ಕಾಂಗ್ರೆಸ್ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಎಎಪಿ ಆರೋಪಿಸಿದೆ.
ಸಾರ್ವತ್ರಿಕ ಚುನಾವಣೆಯ ನಂತರದ ಇಂಡಿ ಬಣ ಮತ್ತು ಅದರ ನಾಯಕತ್ವದ ಭವಿಷ್ಯದ ಬಗ್ಗೆ ಪ್ರಶ್ನೆಗಳು ಹೊರಹೊಮ್ಮಿವೆ.
ಕಾಂಗ್ರೆಸ್ ಚುನಾವಣಾ ಹಿನ್ನಡೆಯನ್ನು ಅನುಭವಿಸಿದ ನಂತರ, ಇತರ ಪ್ರಮುಖ ವಿರೋಧ ಪಕ್ಷವು ಇಂಡಿ ಬಣವನ್ನು ಮುನ್ನಡೆಸಬೇಕೇ ಎಂಬ ಪ್ರಶ್ನೆಗಳು ಎದ್ದಿವೆ. ಅವಕಾಶ ಸಿಕ್ಕರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಬಣವನ್ನು ಮುನ್ನಡೆಸಲು ಮುಂದಾಗಿದ್ದಾರೆ ಮತ್ತು ಹಲವಾರು ಪಾಲುದಾರರು ಅವರನ್ನು ಬೆಂಬಲಿಸಿದ್ದಾರೆ.
#WATCH | Jammu: J&K CM Omar Abdullah says, "… I cannot say anything about what's going on in Delhi because we have nothing to do with Delhi Elections… As far as I remember, there was no time limit to the INDIA alliance. Unfortunately, no INDIA alliance meeting is being… pic.twitter.com/u9w9FazeJG
— ANI (@ANI) January 9, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.