ಒಟ್ಟಾವ: ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ತನಿಖೆಯಲ್ಲಿ ನಾಲ್ವರು ಆರೋಪಿಗಳಿಗೆ ಕೆನಡಾದ ನ್ಯಾಯಾಲಯ ಜಾಮೀನು ನೀಡಿದೆ ಎಂದು ಮೂಲಗಳು ವರದಿ ಮಾಡಿವೆ. ಭಾರತದಿಂದ ಭಯೋತ್ಪಾದಕ ಎಂದು ಗೊತ್ತುಪಡಿಸಲಾಗಿದ್ದ ನಿಜ್ಜರ್ನನ್ನು 2023 ರ ಜೂನ್ನಲ್ಲಿ ಕೆನಡಾದ ಸರ್ರೆಯಲ್ಲಿ ಕೊಲೆ ಮಾಡಲಾಗಿದೆ. ಕೆನಡಾದ ಹಂಗಾಮಿ ಪ್ರಧಾನಿ ಜಸ್ಟಿನ್ ಟ್ರುಡೊ, ನಿಜ್ಜರ್ ಹತ್ಯೆಗೆ ಭಾರತೀಯ ‘ಏಜೆಂಟರು’ ಕಾರಣ ಎಂದು ಆರೋಪಿಸಿದ್ದರು.
ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಾದ ಕಮಲ್ಪ್ರೀತ್ ಸಿಂಗ್, ಕರಣ್ಪ್ರೀತ್ ಸಿಂಗ್, ಅಮನ್ದೀಪ್ ಸಿಂಗ್ ಮತ್ತು ಕರಣ್ ಬ್ರಾರ್ ಅವರು ಪ್ರಥಮ ದರ್ಜೆ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪಗಳ ಮೇಲೆ ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಇವರಿಗೆ ಜಾಮೀನು ಮಂಜೂರಾಗಿದೆ.
ಈಗ ಫೆಬ್ರವರಿ 11 ರಂದು ಬ್ರಿಟಿಷ್ ಕೊಲಂಬಿಯಾ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
ಕೆನಡಾದಲ್ಲಿ ಖಲಿಸ್ಥಾನ್ ಪರ ನಾಯಕನನ್ನು ಹತ್ಯೆ ಮಾಡುವಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ನಿಜ್ಜರ್ ಪ್ರಕರಣವು ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೆನಡಾ ಸಂಸತ್ತಿನಲ್ಲಿ ಮಾತನಾಡಿದ ಟ್ರುಡೊ, ಕೊಲೆಯಲ್ಲಿ ಭಾರತೀಯ ‘ಏಜೆಂಟರು’ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಇದು ಉಭಯ ದೇಶಗಳ ಸಂಬಂಧವನ್ನು ಹಳಸುವಂತೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.