ನವದೆಹಲಿ: ದೇಶದ ಜನರ ಆಕಾಂಕ್ಷೆಗಳಿಂದಲೇ ಭಾರತದ ಆಟೋಮೊಬೈಲ್ ವಲಯವು ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ಆರು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಉದ್ಘಾಟಿಸಿದ ಮೋದಿ, ವಿಕಸಿತ ಭಾರತ ಪ್ರಯಾಣವು ಚಲನಶೀಲ ವಲಯದಲ್ಲಿ ಅಭೂತಪೂರ್ವ ಪರಿವರ್ತನೆ ಮತ್ತು ಘಾತೀಯ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದರು. ಕಳೆದ ವರ್ಷ ದೇಶದ ಆಟೋ ಉದ್ಯಮವು ಶೇಕಡಾ 12 ರಷ್ಟು ವಾರ್ಷಿಕ ಬೆಳವಣಿಗೆಯನ್ನು ಕಂಡಿದೆ ಎಂದು ಅವರು ಎತ್ತಿ ತೋರಿಸಿದರು. ಮೇಕ್ ಇನ್ ಇಂಡಿಯಾ ಉಪಕ್ರಮದ ಬಲವು ದೇಶದ ಆಟೋ ಉದ್ಯಮದ ಬೆಳವಣಿಗೆಯ ನಿರೀಕ್ಷೆಗಳನ್ನು ಉತ್ತೇಜಿಸುತ್ತದೆ ಎಂದು ಮೋದಿ ಹೇಳಿದರು.
ಭಾರತವು ತನ್ನ ಹೊಸ ರಾಷ್ಟ್ರೀಯ ಲಾಜಿಸ್ಟಿಕ್ ನೀತಿಯೊಂದಿಗೆ ವಿಶ್ವದ ಅತ್ಯಂತ ಸ್ಪರ್ಧಾತ್ಮಕ ಲಾಜಿಸ್ಟಿಕ್ ರಾಷ್ಟ್ರವಾಗಲಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಪ್ರಯಾಣದ ಸುಲಭತೆಯು ಇಂದು ಸರ್ಕಾರಕ್ಕೆ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು. ಭಾರತವು ಹಸಿರು ತಂತ್ರಜ್ಞಾನ, ವಿದ್ಯುತ್ ವಾಹನ, ಹೈಡ್ರೋಜನ್ ಇಂಧನ ಮತ್ತು ಜೈವಿಕ ಇಂಧನಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಗಮನಸೆಳೆದರು. ಚಲನಶೀಲತೆ ವಲಯದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ಪ್ರತಿಯೊಬ್ಬ ಹೂಡಿಕೆದಾರರಿಗೆ ದೇಶವು ಅತ್ಯುತ್ತಮ ತಾಣವಾಗಿದೆ ಎಂದು ಅವರು ಒತ್ತಿ ಹೇಳಿದರು.
ಭಾರತವು ಪ್ರಸ್ತುತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ ಮತ್ತು ಮೂರನೇ ಅತಿದೊಡ್ಡ ಪ್ರಯಾಣಿಕ ವಾಹನ ಮಾರುಕಟ್ಟೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತದ ಆಟೋ ಉದ್ಯಮದ ಬೆಳವಣಿಗೆಯ ಸಾಮರ್ಥ್ಯದಲ್ಲಿ ಮೇಕ್ ಇನ್ ಇಂಡಿಯಾ ಉಪಕ್ರಮದ ಮಹತ್ವದ ಪಾತ್ರವನ್ನು ಒತ್ತಿ ಹೇಳಿದ ಮೋದಿ, ಪಿಎಲ್ಐ ಯೋಜನೆಗಳು ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಹೊಸ ಆವೇಗವನ್ನು ನೀಡಿವೆ, 2 ಲಕ್ಷ 25 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮಾರಾಟಕ್ಕೆ ಸಹಾಯ ಮಾಡಿದೆ ಎಂದು ಹೇಳಿದರು. ಈ ಯೋಜನೆಯು ಈ ವಲಯದಲ್ಲಿ 1.5 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಅವರು ಒತ್ತಿ ಹೇಳಿದರು. ಕಳೆದ ನಾಲ್ಕು ವರ್ಷಗಳಲ್ಲಿ ಮಾತ್ರ ಆಟೋ ವಲಯವು 36 ಶತಕೋಟಿ ಡಾಲರ್ಗಳಿಗೂ ಹೆಚ್ಚು ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಒತ್ತಿ ಹೇಳಿದರು.
ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ವಿದ್ಯುತ್ ಚಲನಶೀಲತೆಯ ತ್ವರಿತ ಬೆಳವಣಿಗೆಯನ್ನು ಒತ್ತಿ ಹೇಳಿದ ಮೋದಿ, ಕಳೆದ ದಶಕದಲ್ಲಿ ವಿದ್ಯುತ್ ಚಾಲಿತ ವಾಹನಗಳ ಮಾರಾಟ 640 ಪಟ್ಟು ಹೆಚ್ಚಾಗಿದೆ ಎಂದು ಹೇಳಿದರು. ಕಳೆದ ವರ್ಷ 16.80 ಲಕ್ಷಕ್ಕೂ ಹೆಚ್ಚು ವಿದ್ಯುತ್ ವಾಹನಗಳು ಮಾರಾಟವಾಗಿವೆ ಎಂದು ಅವರು ಗಮನಿಸಿದರು.
ಈ ವರ್ಷ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ವಿಸ್ತರಣೆಯನ್ನು ಪುನರುಚ್ಛರಿಸಿದ ಅವರು, ಕಳೆದ ವರ್ಷ 800 ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಿದ್ದರು ಮತ್ತು 1.5 ಲಕ್ಷಕ್ಕೂ ಹೆಚ್ಚು ಜನರು ಎಕ್ಸ್ಪೋಗೆ ಭೇಟಿ ನೀಡಿದ್ದರು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.