ನವದೆಹಲಿ: ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ 1 ಕೋಟಿ ರೂ. ಬಹುಮಾನ ತಲೆ ಮೇಲೆಹೊತ್ತಿದ್ದ ನಕ್ಸಲ ಸೇರಿದಂತೆ 20 ನಕ್ಸಲರು ಸಾವನ್ನಪ್ಪಿದ್ದಾರೆ. ಈ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಾಚರಣೆಯನ್ನು ಪ್ರಮುಖ ಯಶಸ್ಸು ಎಂದು ಕರೆದಿದ್ದಾರೆ.
ಛತ್ತೀಸ್ಗಢ-ಒಡಿಶಾ ಗಡಿಯಲ್ಲಿರುವ ಕಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿರಿಯ ನಕ್ಸಲ್ ನಾಯಕ ಚಲಪತಿ ಎಂದೂ ಕರೆಯಲ್ಪಡುವ ಜಯರಾಮ್ ರೆಡ್ಡಿ ಸಾವನ್ನಪ್ಪಿದ್ದಾನೆ.
ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ಛತ್ತೀಸ್ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ದ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.
ಒಡಿಶಾದ ನುವಾಪಾಡಾ ಜಿಲ್ಲೆಯ ಗಡಿಯಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಛತ್ತೀಸ್ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಎನ್ಕೌಂಟರ್ ಸ್ಥಳದಿಂದ ಸ್ವಯಂ ಲೋಡಿಂಗ್ ರೈಫಲ್ ಸೇರಿದಂತೆ ಬಂದೂಕುಗಳು, ಮದ್ದುಗುಂಡುಗಳು ಮತ್ತು ಐಇಡಿಗಳ ದೊಡ್ಡ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.