ನವದೆಹಲಿ: 1975 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಯ ಆಧಾರದ ಮೇಲೆ ಮೂಡಿ ಬಂದಿರುವ ನಟ ಕಂಗನಾ ರನೌತ್ ಅವರ ಹೊಸ ಚಲನಚಿತ್ರ ‘ಎಮರ್ಜೆನ್ಸಿ’ ಪ್ರದರ್ಶನಕ್ಕೆ ಯುಕೆಯಲ್ಲಿ ಖಲಿಸ್ಥಾನಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ವರದಿಗಳ ಬರುತ್ತಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಯುನೈಟೆಡ್ ಕಿಂಗ್ಡಮ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ.
“ಹಲವಾರು ಥಿಯೇಟರ್ಗಳಲ್ಲಿ ಪ್ರದರ್ಶನಗೊಳ್ಳಲಿರುವ ‘ಎಮರ್ಜೆನ್ಸಿ’ ಚಲನಚಿತ್ರಕ್ಕೆ ಹೇಗೆ ಅಡ್ಡಿಪಡಿಸಲಾಗುತ್ತಿದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ. ಭಾರತೀಯ ವಿರೋಧಿ ಅಂಶಗಳಿಂದ ಹಿಂಸಾತ್ಮಕ ಪ್ರತಿಭಟನೆ ಮತ್ತು ಬೆದರಿಕೆಯ ಘಟನೆಗಳ ಬಗ್ಗೆ ನಾವು ಯುಕೆ ಜೊತೆ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತೇವೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತಿರುವುದು ಸಹನೀಯವಲ್ಲ” ಎಂದಿದೆ.
“ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸುತ್ತಿರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಚಿವಾಲಯ ತಿಳಿಸಿದೆ.
“ಅಡ್ಡಿಪಡಿಸುತ್ತಿರುವವರ ವಿರುದ್ಧ ಯುಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಲಂಡನ್ನಲ್ಲಿರುವ ನಮ್ಮ ಹೈಕಮಿಷನ್ ನಮ್ಮ ಸಮುದಾಯದ ಸದಸ್ಯರ ಸುರಕ್ಷತೆಗಾಗಿ ಸಂಪರ್ಕದಲ್ಲಿದೆ” ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.