ಚೆನ್ನೈ: ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ನಂತರ ತಮಿಳುನಾಡಿನ ರಾಮೇಶ್ವರಂನ ಆರು ಮೀನುಗಾರರು ತವರಿಗೆ ಆಗಮಿಸಿದ್ದಾರೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಸ್ತಕ್ಷೇಪದಿಂದ ಅವರ ಬಿಡುಗಡೆಗೆ ಅನುಕೂಲವಾಯಿತು ಎಂದು ಅವರು ತಿಳಿಸಿದ್ದಾರೆ.
ಆರು ಜನರು ಕೊಲಂಬೊದಿಂದ ವಿಮಾನ ಹತ್ತಿ ಬುಧವಾರ ರಾತ್ರಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದರು. ಅವರನ್ನು ರಾಜ್ಯ ಅಧಿಕಾರಿಗಳು ಬರಮಾಡಿಕೊಂಡರು. ರಸ್ತೆ ಮೂಲಕ ತವರು ಜಿಲ್ಲೆಗೆ ತಲುಪಲು ಅವರಿಗೆ ವ್ಯವಸ್ಥೆ ಮಾಡಲಾಯಿತು ಎಂದಿದ್ದಾರೆ.
ಜನವರಿ 12 ರಂದು ಮೀನುಗಾರಿಕೆಗೆ ಹೊರಟಿದ್ದ ಮೀನುಗಾರರನ್ನು ಸಮುದ್ರ ಗಡಿ ದಾಟಿದ್ದಾರೆಂದು ಆರೋಪಿಸಿ ಲಂಕಾ ಕರಾವಳಿ ಕಾವಲು ಪಡೆ ಬಂಧಿಸಿ ಅವರ ಹಡಗನ್ನು ವಶಕ್ಕೆ ಪಡೆಯಿತು. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ರಿಮಾಂಡ್ ಮಾಡಲಾಯಿತು.
ಬಂಧಿತ ಮೀನುಗಾರರ ಬಿಡುಗಡೆಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶವನ್ನು ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದನ್ನು ನೆನಪಿಸಿಕೊಳ್ಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.