ನವದೆಹಲಿ: ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ’ಶೂನ್ಯ ಭ್ರಷ್ಟಾಚಾರ’ ಖಚಿತಪಡಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ತಂಡವನ್ನು ರಚಿಸಲು ನಿರ್ಧರಿಸಿದೆ.
ಭ್ರಷ್ಟಾಚಾರ ಆರೋಪದ ಮೇಲೆ ಆಸಿಮ್ ಅಲಿ ಖಾನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದ ಕೇಜ್ರಿವಾಲ್, ಎಲ್ಲಾ ಇಲಾಖೆಗಳ ಅಧಿಕಾರಿಳ ಜೊತೆ ಸಭೆ ಸೇರಿ ಈ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕೇಜ್ರಿವಾಲ ಹೇಳಿದ್ದಾರೆ.
ಈ ತಂಡಗಳ ಅಧಿಕಾರಿಗಳು ಕಣ್ಗಾವಲಿನಲ್ಲಿ ಕಾರ್ಯ ನಿರ್ವಹಿಸಲಿವೆ. ಇದಕ್ಕಾಗಿ ಮಾಹಿತಿ ಸಂಕೀರ್ಣ ವ್ಯವಸ್ಥೆ (Information network) ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಮಾಹಿತಿ ಸಂಕೀರ್ಣ ವ್ಯವಸ್ಥೆ ಮೂಲಕ ಯಾವುದೇ ಇಲಾಖೆಯ ಅಧಿಕಾರಿಗಳು ಲಂಚ ಪಡೆಯುವುದನ್ನು ಪತ್ತೆ ಹಚ್ಚಿ ಅವರನ್ನು ತಮ್ಮ ಕೆಲಸದಿಂದ ವಜಾಗೊಳಿಸಲಾಗುವುದು. ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಮನೀಷ್ ಸಿಸೋದಿಯ ಹೇಳಿದ್ದಾರೆ.
ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ಸೇರಿದಂತೆ ಯಾವುದೇ ರೀತಿಯ ಸಂಪನ್ಮೂಲಗಳ ಅಗತ್ಯವಿದ್ದಲ್ಲಿ ಸರ್ಕಾರ ಒದಗಿಸಲಿದೆ ಎಂದು ಈ ಸಂದರ್ಭದಲ್ಲಿ ವಿವರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.