ನವದೆಹಲಿ: ದೆಹಲಿ-ಎನ್ಸಿಆರ್ ನಿವಾಸಿಗಳು ಇಂದು ಬೆಳಿಗ್ಗೆ ಬಲವಾದ ಭೂಕಂಪನದ ಅನುಭವವನ್ನು ಅನುಭವಿಸಿ ಆತಂಕಕ್ಕೆ ಒಳಗಾಗಿದ್ದಾರೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 5:36 ರ ಸುಮಾರಿಗೆ ರಾಷ್ಟ್ರ ರಾಜಧಾನಿಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನದಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಯಾವುದೇ ಹಾನಿ ಅಥವಾ ಗಾಯಗಳಾದ ಬಗ್ಗೆ ತಕ್ಷಣದ ವರದಿಗಳಿಲ್ಲದಿದ್ದರೂ ಜನರಲ್ಲಿ ಭೀತಿ ಮನೆ ಮಾಡಿದೆ. ಗಾಜಿಯಾಬಾದ್ ನಿವಾಸಿಯೊಬ್ಬರು ಈ ಹಿಂದೆಂದೂ ಇಂತಹ ಅನುಭವ ಆಗಿರಲಿಲ್ಲ ಎಂದು ಹೇಳಿದ್ದಾರೆ. “ಕಂಪನಗಳು ತುಂಬಾ ಬಲವಾಗಿದ್ದವು. ರೈಲು ಹತ್ತಿರದಲ್ಲಿ ಚಲಿಸುತ್ತಿರುವಂತೆ ಭಾಸವಾಯಿತು. ಎಲ್ಲವೂ ನಡುಗುತ್ತಿತ್ತು. ನನಗೆ ಇದುವರೆಗೆ ಈ ರೀತಿ ಅನುಭವ ಆಗಿರಲಿಲ್ಲ. ಇಡೀ ಕಟ್ಟಡವೇ ನಡುಗುತ್ತಿತ್ತು” ಎಂದಿದ್ದಾರೆ.
ಈ ಬಗ್ಗೆ X ಪೋಸ್ಟ್ ಮಾಡಿರುವ ದೆಹಲಿ ಪೊಲೀಸರು, “ದೆಹಲಿ, ನೀವೆಲ್ಲರೂ ಸುರಕ್ಷಿತರಾಗಿದ್ದೀರಿ ಎಂದು ನಾವು ಭಾವಿಸುತ್ತೇವೆ!” ಎಂದು ಹೇಳಿದ್ದಾರೆ. ತುರ್ತು ಪರಿಸ್ಥಿತಿಗಳಿಗಾಗಿ ನಾಗರಿಕರು ತುರ್ತು 112 ಸಹಾಯವಾಣಿಗೆ ಕರೆ ಮಾಡುವಂತೆಯೂ ಅದು ಒತ್ತಾಯಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ದೆಹಲಿ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳಿಗೆ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಒತ್ತಾಯಿಸಿದ್ದಾರೆ.
“ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಕಂಡುಬಂದಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಸಂಭವನೀಯ ನಂತರದ ಆಘಾತಗಳ ಬಗ್ಗೆ ಎಚ್ಚರದಿಂದಿರಲು ಒತ್ತಾಯಿಸುತ್ತಿದ್ದೇನೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ.
Tremors were felt in Delhi and nearby areas. Urging everyone to stay calm and follow safety precautions, staying alert for possible aftershocks. Authorities are keeping a close watch on the situation.
— Narendra Modi (@narendramodi) February 17, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.