ಸುಬ್ರಹ್ಮಣ್ಯ: ಎತ್ತಿನಹೊಳೆ ವಿರೋಧಿಸಿ ಹೋರಾಟ ನಡೆಸುತ್ತಿರುವುದು ರಾಜಕಾರಣಕ್ಕಾಗಿ ಅಲ್ಲ. ದ.ಕ.ಜಿಲ್ಲೆಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು. ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಜನ ಭಾಗವಹಿಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಗುಂಡ್ಯದಲ್ಲಿ ಮಂಗಳವಾರ ಎತ್ತಿನಹೊಳೆ ಯೋಜನೆ ಮತ್ತು ನೇತ್ರಾವತಿ ತಿರುವು ಯೋಜನೆಯನ್ನು ವಿರೋಧಿಸಿ ನಾಲ್ಕು ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜಿಲ್ಲೆಯ ಜೀವನದಿ ನೇತ್ರಾವತಿಯ ಉಳಿವಿಗಾಗಿ ಅಹಿಂಸಾತ್ಮಕ ಹೋರಾಟ ಮುಂದುವರಿಯಲಿದೆ ಎಂದರು. ಈ ಯೋಜನೆಯ ವಿರುದ್ಧ ಬೆಂಬಲ ನೀಡಿ ಹೋರಾಟಕ್ಕೆ ಶಕ್ತಿ ತುಂಬಲು ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.
ಸರಕಾರ ಬೇಕಾದರೆ ಪರ್ಯಾಯ ವ್ಯವಸ್ಥೆಯನ್ನು ಮಾಡಿ ಬಯಲು ಸೀಮೆಗೆ ನೀರು ಒದಗಿಸಲಿ. ಅದಕ್ಕಾಗಿ ನೇತ್ರಾವತಿ ತಿರುವು ಯೋಜನೆ ಬೇಡ. ಬಯಲು ಸೀಮೆಗೆ ನೀರು ಪೂರೈಕೆ ಮಾಡಲು ನಮ್ಮ ವಿರೋಧವಿಲ. ಆದರೆ ನೇತ್ರಾವತಿ ತಿರುವನ್ನು ಮಾಡಲು ಬಿಡುವುದಿಲ್ಲ ಎಂದು ಹೇಳಿದರು.
ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಗಣೇಶ್ ಕಾರ್ಣಿಕ್, ಎಸ್. ಅಂಗಾರ, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಬಿ. ನಾಗರಾಜ ಶೆಟ್ಟಿ, ಗಂಗಾಧರ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಎನ್. ಯೋಗೀಶ್ ಭಟ್, ಮಲ್ಲಿಕಾ ಪ್ರಸಾದ್, ಪ್ರಭಾಕರ ಬಂಗೇರ, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿ.ಪಂ. ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಪುತ್ತೂರು ತಾ.ಪಂ. ಅಧ್ಯಕ್ಷೆ ಪುಲಸ್ತ್ಯಾ ರೈ, ಪ್ರಮುಖರಾದ ವಿಕಾಸ್ ಪುತ್ತೂರು, ಜಿ.ಕೆ. ಸುಲೋಚನಾ ಭಟ್, ಎಸ್. ಎನ್. ಮನ್ಮಥ ಉಪಸ್ಥಿತರಿದ್ದರು. ಸಂಜೀವ ಮಠಂದೂರು ಸ್ವಾಗತಿಸಿ, ಪುಯಿಲ ಕೇಶವ ಗೌಡ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.