ನವದೆಹಲಿ: ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿಯಲ್ಲಿ 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಾಸಿಕ್ಯೂಷನ್ ಮಾಜಿ ಕಾಂಗ್ರೆಸ್ ಸಂಸದನಿಗೆ ಮರಣದಂಡನೆ ವಿಧಿಸುವಂತೆ ಕೋರಿತ್ತು. ಈ ಪ್ರಕರಣವು ತಂದೆ-ಮಗನ ಹತ್ಯೆಗೆ ಸಂಬಂಧಿಸಿದೆ.
ಫೆಬ್ರವರಿ 12 ರಂದು ನ್ಯಾಯಾಲಯವು ಕುಮಾರ್ ಅವರನ್ನು ಈ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿತು. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಶಿಕ್ಷೆಯ ಆದೇಶವನ್ನು ಹೊರಡಿಸಿದರು. ಕಳೆದ ವರ್ಷ ಡಿಸೆಂಬರ್ನಲ್ಲಿ, ಪ್ರಾಸಿಕ್ಯೂಷನ್ ತನ್ನ ವಾದಗಳನ್ನು ಪೂರ್ಣಗೊಳಿಸಿದ ನಂತರ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ತೀರ್ಪನ್ನು ಕಾಯ್ದಿರಿಸಿದರು.
ಕುಮಾರ್ಗೆ ನೀಡಿರುವ ಶಿಕ್ಷೆಯ ಪ್ರಮಾಣದ ಬಗ್ಗೆ ದೆಹಲಿ ಸಿಖ್ ನಾಯಕರು ನಿರಾಶೆ ವ್ಯಕ್ತಪಡಿಸಿದ್ದಾರೆ. ಸಿಖ್ ಸಂಘಟನೆಗಳು ಆತನಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸುತ್ತಿದ್ದವು.
#WATCH | Delhi Sikh Gurudwara Management Committee (DSGMC) General Secretary Jagdip Singh Kahlon says, "We are upset that someone like Sajjan Kumar was not given the death penalty. I believe if he had been given a death sentence, it would have been better, and we would have felt… pic.twitter.com/qognjxVIsB
— ANI (@ANI) February 25, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.