ನವದೆಹಲಿ: ಇಂದು ರಾಷ್ಟ್ರೀಯ ವಿಜ್ಞಾನ ದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಕುತೂಹಲ ವಿಜ್ಞಾನದ ತಾಯಿ ಎಂದು ಬಣ್ಣಸಿದ್ದಾರೆ. ವಿಜ್ಞಾನ ಮತ್ತು ಜ್ಞಾನ ಒಟ್ಟಾಗಿ ಪ್ರತಿಯೊಂದು ಸಮಸ್ಯೆಗೂ ಪರಿಹಾರದ ಬಾಗಿಲು ತೆರೆಯುತ್ತದೆ ಎಂದು ಪ್ರಧಾನಿ ಹೇಳಿದರು.
ವಿಜ್ಞಾನ ಮತ್ತು ನಾವೀನ್ಯತೆಯನ್ನು ಜನಪ್ರಿಯಗೊಳಿಸುವುದನ್ನು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ವಿಜ್ಞಾನವನ್ನು ಬಳಸಿಕೊಳ್ಳುವುದನ್ನು ಎಲ್ಲರೂ ಮುಂದುವರಿಸಬೇಕೆಂದು ಅವರು ಒತ್ತಾಯಿಸಿದರು.
ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರದ ಸ್ಮರಣಾರ್ಥ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಜನಸಾಮಾನ್ಯರಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮೂಲ ಉದ್ದೇಶವಾಗಿದ್ದು, ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ನೆನಪಿಸಲಾಗುತ್ತದೆ.
Greetings on National Science Day to those passionate about science, particularly our young innovators. Let’s keep popularising science and innovation and leveraging science to build a Viksit Bharat.
During this month’s #MannKiBaat, had talked about ‘One Day as a… pic.twitter.com/iXIYwSmdDr
— Narendra Modi (@narendramodi) February 28, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.