ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಎತ್ತರದ ಮಾನಾ ಗ್ರಾಮದಲ್ಲಿರುವ ಬಿಆರ್ಒ ಶಿಬಿರವನ್ನು ಆವರಿಸಿದ್ದ ಹಿಮಪಾತದಿಂದ ರಕ್ಷಣಾ ಸಿಬ್ಬಂದಿ ಮತ್ತೆ 14 ಕಾರ್ಮಿಕರನ್ನು ಹೊರತೆಗೆದಿದ್ದಾರೆ, ಒಟ್ಟು 47 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 8 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಪಾತ ಸಂಭವಿಸಿದ ಸ್ಥಳದಲ್ಲಿ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಪುನರಾರಂಭವಾಗಿದೆ. ಎಂಟು ಕಾರ್ಮಿಕರು ಇನ್ನೂ ಸಿಲುಕಿಕೊಂಡಿದ್ದಾರೆ.
ಮಾನಾ ಮತ್ತು ಬದರಿನಾಥ್ ನಡುವಿನ ಗಡಿ ರಸ್ತೆಗಳ ಸಂಸ್ಥೆ (ಬಿಆರ್ಒ) ಶಿಬಿರಕ್ಕೆ ಶುಕ್ರವಾರ ಮುಂಜಾನೆ ಅಪ್ಪಳಿಸಿದ ಹಿಮಪಾತದ ಅಡಿಯಲ್ಲಿ ಸಿಲುಕಿದ್ದ 55 ಕಾರ್ಮಿಕರಲ್ಲಿ ಒಟ್ಟು 33 ಜನರನ್ನು ರಕ್ಷಿಸಲಾಗಿದೆ. ಉಳಿದ ಎಂಟು ಮಂದಿ 24 ಗಂಟೆಗಳಿಗೂ ಹೆಚ್ಚು ಕಾಲ ಹಿಮದಲ್ಲಿ ಸಿಲುಕಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ.
ಶುಕ್ರವಾರ ಮಳೆ ಮತ್ತು ಹಿಮಪಾತವು ರಕ್ಷಣಾ ಕಾರ್ಯಗಳಿಗೆ ಅಡ್ಡಿಯುಂಟುಮಾಡಿತು ಮತ್ತು ರಾತ್ರಿಯಾಗುತ್ತಿದ್ದಂತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು.
ಶನಿವಾರ ಹವಾಮಾನ ಸುಧಾರಿಸುತ್ತಿದ್ದಂತೆ, ಹೆಲಿಕಾಪ್ಟರ್ಗಳು ಕಾರ್ಯಾಚರಣೆಯಲ್ಲಿ ಸೇರಿಕೊಂಡವು.
ಮಾನಾದಲ್ಲಿ ನೆಲೆಸಿರುವ ಸೇನೆ ಮತ್ತು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಬೆಳಿಗ್ಗೆ ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿದರು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಎನ್ ಕೆ ಜೋಶಿ ತಿಳಿಸಿದ್ದಾರೆ.
Uttarakhand | 14 civilians have been rescued and evacuted from avalanche site by Indian Army this morning. Search and rescue operations continuing for more than 24 hours. With slight respite in the weather, three injured personnel evacuated from Mana to Joshimath for critical… pic.twitter.com/46gJQYxq8B
— ANI (@ANI) March 1, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.