ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಗದಿತ ಕಾರ್ಯಕ್ರಮವನ್ನು ಬದಲಾಯಿಸಿದ್ದು, ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ)ನ 10ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ತಮ್ಮ ಕಾರ್ಯಸೂಚಿಯಂತೆ ಸೋಮವಾರದಿಂದ ಆರಂಭವಾದ ಬಿಹಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕಿದ್ದ ಮೋದಿಯವರ ಕಾರ್ಯಕ್ರಮದಲ್ಲಿ ಈ ಅಧಿಕೃತ ಬದಲಾವಣೆ ಮಾಡಲಾಗಿದೆ. ಆರ್ಟಿಐ ಜಾರಿಗೆ ಬಂದ ದಿನವಾದ ಅ.12ರಂದು ನಡೆಯಬೇಕಿದ್ದ ಈ ಸಮಾರಂವನ್ನು ಪ್ರಧಾನಿಯವರ ವೇಳಾಪಟ್ಟಿಗೆ ತಕ್ಕಂತೆ ಮುಂದೂಡಲಾಗಿದೆ.
ಸಾಂಪ್ರದಾಯಿಕವಾಗಿ ಕಾರ್ಯಕ್ರಮವು ರಾಷ್ಟ್ರಪತಿ ಇಲ್ಲವೇ ಪ್ರಧಾನಿಯವರ ಭಾಷಣದೊಂದಿಗೆ ಆರಂಭಗೊಳ್ಳುತ್ತದೆ. ಕಳೆದ ವರ್ಷ ಆಗಸ್ಟ್ನಲ್ಲಿ ರಾಜೀವ್ ಮಾಥುರ್ ಅವರು ನಿವೃತ್ತಿ ಹೊಂದಿದ ಬಳಿಕ ಮಾಹಿತಿ ಆಯುಕ್ತರ ನೇಮಕದಲ್ಲಿ ವಿಳಂಬವಾಗಿದ್ದರಿಂದ ಈ ಸಮಾರಂಭ ನಡೆಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.