ನವದೆಹಲಿ: ಹಿಂದೂ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯ ಧೋರಣೆಗೆ ಹೆಸರಾಗಿರುವ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯವು ಇದೀಗ ಹೋಳಿ ಹಬ್ಬ ಆಚರಣೆಗೆ ಅವಕಾಶ ನೀಡದೆ ವಿದ್ಯಾರ್ಥಿಗಳು ಸತಾಯಿಸಲು ಆರಂಭಿಸಿದೆ.
ವಿದ್ಯಾರ್ಥಿಗಳು ಮಾರ್ಚ್ 9 ರಂದು ‘ಹೋಳಿ ಮಿಲನ್’ ಆಚರಣೆಗೆ ಅವಕಾಶ ನೀಡುವಂತೆ ಕೋರಿ ಆಡಳಿತ ಮಂಡಳಿಗೆ ಪತ್ರ ಬರೆದಿದ್ದಾರೆ, ಆದರೆ ಇದುವರೆಗೂ ಅನುಮತಿಯನ್ನು ನೀಡಿಲ್ಲ. ಈ ಕ್ರಮವನ್ನು ವಿರೋಧಿಸಿ ಅಖಿಲ ಭಾರತೀಯ ಕರ್ಣಿ ಸೇನೆಯ ಸದಸ್ಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ವಿಶ್ವವಿದ್ಯಾಲಯ ಅನುಮತಿಯನ್ನು ನೀಡದೇ ಹೋದರೆ ಮಾರ್ಚ್ 10 ರಂದು ಕ್ಯಾಂಪಸ್ ಒಳಗೆ ನುಗ್ಗಿ ವಿದ್ಯಾರ್ಥಿಗಳೊಂದಿಗೆ ಹೋಳಿ ಆಚರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
AMU ವಿದ್ಯಾರ್ಥಿ ಅಖಿಲ್ ಕೌಶಲ್ ಈ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿಗಾಗಿ ವಿನಂತಿಸಲಾಗಿದೆ ಎಂಬುದನ್ನು ದೃಢಪಡಿಸಿದರು. “ಫೆಬ್ರವರಿ 25 ರಂದು, AMU ವಿದ್ಯಾರ್ಥಿಗಳು ಮಾರ್ಚ್ 9 ರಂದು ‘ಹೋಳಿ ಮಿಲನ್’ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ಕೋರಿ AMU ಉಪಕುಲಪತಿಗಳಿಗೆ ಪತ್ರ ಬರೆದಿದ್ದರು. ಇಲ್ಲಿಯವರೆಗೆ, ನಮಗೆ ಅದಕ್ಕೆ ಅನುಮತಿ ನೀಡಲಾಗಿಲ್ಲ” ಎಂದು ಅವರು ಹೇಳಿದ್ದಾರೆ.
#WATCH | Aligarh, UP | Aligarh Muslim University student Akhil Kaushal says, "On 25th February, AMU students had written to AMU VC seeking permission to organise the 'Holi Milan' program on March 9. Till now, we have not been granted permission for it…" pic.twitter.com/YOUtfhFnio
— ANI UP/Uttarakhand (@ANINewsUP) March 6, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.