ನವದೆಹಲಿ: ಇ-ಶ್ರಮ್ ಪೋರ್ಟಲ್ನಲ್ಲಿ 30 ಕೋಟಿ 68 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ರಚನೆಗಾಗಿ ಈ ಪೋರ್ಟಲ್ ಅನ್ನು 2021 ರಲ್ಲಿ ಪ್ರಾರಂಭಿಸಲಾಯಿತು.
ನಿನ್ನೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ವಿಷಯ ತಿಳಿಸಿದ್ದಾರೆ. ಒಟ್ಟು ನೋಂದಾಯಿತ ಕಾರ್ಮಿಕರಲ್ಲಿ ಶೇಕಡಾ 53 ಕ್ಕಿಂತ ಹೆಚ್ಚು ಮಹಿಳೆಯರು ಎಂದು ಹೇಳಿದ್ದಾರೆ.
ಇಲ್ಲಿಯವರೆಗೆ, ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ 13 ಯೋಜನೆಗಳನ್ನು ಈಗಾಗಲೇ ಇ-ಶ್ರಮ್ನೊಂದಿಗೆ ಸಂಯೋಜಿಸಲಾಗಿದೆ. ಇದರಲ್ಲಿ ಪಿಎಂ-ಎಸ್ವಿಎನಿಧಿ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ ಮತ್ತು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.