ಫ್ಲೋರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬರೋಬ್ಬರಿ ಒಂಬತ್ತು ತಿಂಗಳು ಕಾಲ ಕಳೆದಿರುವ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕೊನೆಗೂ ಭೂಮಿಗೆ ಸುರಕ್ಷಿತವಾಗಿ ಬಂದು ತಲುಪಿದ್ದಾರೆ. ಕಳೆದ ವರ್ಷ ಜೂನ್ 5 ರಂದು ಬೋಯಿಂಗ್ ಸ್ಟಾರ್ಲೈನರ್ನಲ್ಲಿ ಬಾಹ್ಯಾಕಾಶಕ್ಕೆ ಹಾರಿದ ಅವರು ಇಂದು ಬೆಳಿಗ್ಗೆ ಸ್ಪೇಸ್ಎಕ್ಸ್ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮೂಲಕ ಭೂಮಿಗೆ ಬಂದಿಳಿದರು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ 17 ಗಂಟೆಗಳ ಕಾಲ ಪ್ರಯಾಣಿಸಿದ ಐಎಸ್ಎಸ್ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು. ಬಳಿಕ ಡ್ರ್ಯಾಗನ್ ಕ್ಯಾಪ್ಸೂಲ್ ತೆರೆದಯಕೊಂಡಿತು. ಗಗನಯಾಣಿಗಳಿಗೆ ಅದರಿಂದ ಹೊರಬರಲು ಬೇಕಾದ ಸಾಧನಗಳನ್ನು ನೀಡಲಾಯಿತು.
ಸುನೀತಾ ವಿಲಿಯಮ್ಸ್ ಕ್ಯಾಪ್ಸುಲ್ನಿಂದ ಹೊರಬರುವಾಗ ಕೈ ಬೀಸುತ್ತಾ ಮತ್ತು ಹೆಬ್ಬೆರಳುಗಳನ್ನು ಮೇಲಕ್ಕೆತ್ತುವ ಮೂಲಕ ವಿಜಯ ಚಿಹ್ನೆಗಳನ್ನು ಮಾಡಿ ಹರ್ಷ ವ್ಯಕ್ತಪಡಿಸಿದರು.
PROMISE MADE, PROMISE KEPT: President Trump pledged to rescue the astronauts stranded in space for nine months.
Today, they safely splashed down in the Gulf of America, thanks to @ElonMusk, @SpaceX, and @NASA! pic.twitter.com/r01hVWAC8S
— The White House (@WhiteHouse) March 18, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.