ಆಗ್ರಾ: ದಾದ್ರಿ ಘಟನೆಗೆ ಪ್ರತಿಕಾರ ತೀರಿಸುವ ಸಲುವಾಗಿ ಉಗ್ರರು ಅಲ್ಲಿ ಬಾಂಬ್ ದಾಳಿಗಳನ್ನು ನಡೆಸಲು ಮುಂದಾಗಿದ್ದಾರೆ ಎಂಬ ಭಯಾನಕ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದ್ದು, ಈ ಬಗ್ಗೆ ಕಟ್ಟೆಚ್ಚರದಿಂದ ಇರುವಂತೆ ಸೂಚನೆ ನೀಡಿದೆ.
ಸ್ಲೀಪರ್ ಸೆಲ್ಗಳನ್ನು ಆಕ್ಟಿವೇಟ್ ಮಾಡಿ ವಿವಿಧ ನಗರಗಳಲ್ಲಿ ಬಾಂಬ್ ದಾಳಿ ನಡೆಸುವ ಹುನ್ನಾರ ಉಗ್ರರದ್ದು ಎನ್ನಲಾಗಿದೆ. ಅಲ್ಲದೇ ವಿಎಚ್ಪಿ ಮುಖಂಡ ಅಶೋಕ್ ಸಿಂಘಾಲ್, ಪ್ರವೀಣ್ ತೊಗಾಡಿಯಾ ಅವರನ್ನೂ ಈ ಉಗ್ರರು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
’ಗುರುದಾಸ್ಪುರದಲ್ಲಿ ದಾಳಿ ನಡೆಸಲು ವಿಫಲರಾಗಿರುವ ಉಗ್ರರು, ಇದೀಗ ದಾದ್ರಿ ಘಟನೆಯನ್ನು ಎನ್ಕ್ಯಾಶ್ ಮಾಡಿಕೊಂಡು ಅಲ್ಲಿ ಹಬ್ಬಗಳ ಸಂದರ್ಭದಲ್ಲಿ ದಾಳಿಗಳನ್ನು ನಡೆಸಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ನಾವು ಹೈಅಲರ್ಟ್ನಲ್ಲಿ ಇದ್ದೇವೆ’ ಎಂದು ಹಿರಿಯ ಸುಪರಿಟೆಂಡೆಂಟ್ ಆಫ್ ಪೊಲೀಸ್ ಗೋಪೇಶ್ನಾಥ್ ಖನ್ನಾ ತಿಳಿಸಿದ್ದಾರೆ.
ಈಗಾಗಲೇ ಇಬ್ಬರು ಶಂಕಿತರನ್ನು ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.