ನವದೆಹಲಿ: ಭಾರತದ ವೇಗಿ ಜಹೀರ್ ಖಾನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ. ಟ್ವಿಟರ್ ಮೂಲಕ ಅವರು ಗುರುವಾರ ತನ್ನ ರಾಜೀನಾಮೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಜಹೀರ್ ಭಾರತದ 4ನೇ ಅತಿಹೆಚ್ಚು ವಿಕೆಟ್ ಟೇಕರ್ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ, 2011ರ ಭಾರತ ವಿಶ್ವಕಪ್ ವಿಜಯದಲ್ಲೂ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ತನ್ನ ನಿವೃತ್ತಿಯ ಬಗ್ಗೆ ಟ್ವೀಟ್ ಮಾಡಿರುವ ಅವರು, ’ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಾನು ವಿದಾತ ಹೇಳುತ್ತಿದ್ದೇನೆ. ಐಪಿಎಲ್ 9ರ ಆವೃತ್ತಿಗೆ ಸಹಿ ಮಾಡುವುದನ್ನು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.
ಅಕ್ಟೋಬರ್ 3, 2000ರಲ್ಲಿ ಕೇನ್ಯಾದ ನೈರೋಬಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಜಹೀರ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿ 10 ಓವರ್ಗೆ 48 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು.
ಒಟ್ಟು 200 ಏಕದಿನವನ್ನು ಅವರು ಆಡಿದ್ದು, 282 ವಿಕೆಟ್ ಕಬಳಿಸಿದ್ದಾರೆ.
2000 ಇಸವಿಯಲ್ಲಿ ಢಾಕಾದಲ್ಲಿ ಬಾಂಗ್ಲಾದೇಶದ ವಿರುದ್ಧ ಅವರು ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. 92 ಟೆಸ್ಟ್ ಆಡಿರುವ ಅವರು, 311 ವಿಕೆಟ್ ಕಬಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.