ಚೆನ್ನೈ: ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.
ಅವರ ನಾಮನಿರ್ದೇಶನವು ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಮತ್ತು ಬಿಜೆಪಿ ಶಾಸಕಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಸೇರಿದಂತೆ ಪ್ರಮುಖ ನಾಯಕರಿಂದ ಅನುಮೋದನೆ ಪಡೆದಿದೆ ಎಂದು ಪಕ್ಷ ದೃಢಪಡಿಸಿದೆ.
ಟ್ವಿಟ್ ಮಾಡುವ ಮೂಲಕ ಅಮಿತ್ ಶಾ ಅವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಅಲ್ಲದೇ ಕೆ.ಅಣ್ಣಾಮಲೈ ಅವರಿಗೆ ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಮಹತ್ತರ ಸಜವಾಬ್ದಾರಿ ನೀಡುವುದಾಗಿ ತಿಳಿಸಿದ್ದಾರೆ.
The Tamil Nadu BJP has received a nomination for the post of state president only from Shri @NainarBJP Ji.
As the President of the Tamil Nadu BJP unit, Shri @annamalai_k Ji has made commendable accomplishments. Whether it is carrying the policies of PM Shri @narendramodi Ji to…
— Amit Shah (@AmitShah) April 11, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.