ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಎಐಎಡಿಎಂಕೆ ಮತ್ತು ಬಿಜೆಪಿ 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಲಿವೆ ಎಂದು ದೃಢಪಡಿಸಿದ್ದಾರೆ. ಈ ವೇಳೆ ಅವರೊಂದಿಗೆ ವೇದಿಕೆಯಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಇದ್ದರು.
“ಈ ಚುನಾವಣೆಯನ್ನು ರಾಷ್ಟ್ರೀಯವಾಗಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಇಪಿಎಸ್ ಮತ್ತು ಎಐಎಡಿಎಂಕೆ ಮುನ್ನಡೆಸಲಿದ್ದಾರೆ” ಎಂದು ಶಾ ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರ ಸಭೆಯನ್ನುದ್ದೇಶಿಸಿ ಹೇಳಿದರು.
1998 ರಿಂದ ಎಐಎಡಿಎಂಕೆ ಎನ್ಡಿಎಯ ಭಾಗವಾಗಿದೆ ಮತ್ತು ಪ್ರಧಾನಿ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದಾರೆ ಎಂದ ಶಾ, ಎನ್ಡಿಎ ಪಾಲುದಾರಿಕೆ ಗೆಲ್ಲುತ್ತದೆ ಎಂದು ಪ್ರತಿಪಾದಿಸಿದರು. “ನಮ್ಮ ಮೈತ್ರಿಕೂಟ ಹೆಚ್ಚು ಬಲಿಷ್ಠವಾಗಿದೆ. ಎನ್ಡಿಎ ಪ್ರಮುಖ ಗೆಲುವು ಸಾಧಿಸುತ್ತದೆ ಮತ್ತು ತಮಿಳುನಾಡಿನಲ್ಲಿ ಎನ್ಡಿಎ ಸರ್ಕಾರ ರಚನೆಯಾಗುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ” ಎಂದು ಹೇಳಿದರು.
ಪಳನಿಸ್ವಾಮಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ ಎಂದು ಶಾ ಸ್ಪಷ್ಟಪಡಿಸಿದರು. “ನಾವು ಪಳನಿಸ್ವಾಮಿ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ಅವರು ಹೇಳಿದರು.
#WATCH | Chennai, Tamil Nadu: On NDA alliance for Tamil Nadu Vidhan Sabha elections, Union Home Minister Amit Shah says, "These elections will be contested under the leadership of PM Modi on a national level and under the leadership of AIADMK leader Edappadi K. Palaniswami on the… pic.twitter.com/NHgNC4SviR
— ANI (@ANI) April 11, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.