ನವದೆಹಲಿ: ಎಐಎಡಿಎಂಕೆ ಎನ್ಡಿಎ ಸೇರುವ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದ್ದು, ಇತರ ಎನ್ಡಿಎ ಪಾಲುದಾರರೊಂದಿಗೆ ಸೇರಿ ತಮಿಳುನಾಡನ್ನು ಪ್ರಗತಿಯ ಹೊಸ ಎತ್ತರಕ್ಕೆ ಏರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ತಮಿಳುನಾಡಿನ ಪ್ರಗತಿಯ ಕಡೆಗೆ ಒಟ್ಟಾಗಿ, ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆ! ಎಐಎಡಿಎಂಕೆ ಎನ್ಡಿಎ ಕುಟುಂಬಕ್ಕೆ ಸೇರುತ್ತಿರುವುದು ಸಂತೋಷ ತಂದಿದೆ. ನಮ್ಮ ಇತರ ಎನ್ಡಿಎ ಪಾಲುದಾರರೊಂದಿಗೆ ಒಟ್ಟಾಗಿ, ನಾವು ತಮಿಳುನಾಡನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಮತ್ತು ರಾಜ್ಯಕ್ಕೆ ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತೇವೆ. ಮಹಾನ್ ಎಂಜಿಆರ್ ಮತ್ತು ಜಯಲಲಿತಾ ಅವರ ದೃಷ್ಟಿಕೋನವನ್ನು ಈಡೇರಿಸುವ ಸರ್ಕಾರವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದಿದ್ದಾರೆ.
ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಮಿಳುನಾಡಿನ ಪ್ರಗತಿಗಾಗಿ ಭ್ರಷ್ಟ ಡಿಎಂಕೆ ಸರ್ಕಾರವನ್ನು ಬೇರುಸಹಿತ ಕಿತ್ತುಹಾಕುತ್ತದೆ ಎಂದು ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.
“ತಮಿಳುನಾಡಿನ ಪ್ರಗತಿಗಾಗಿ ಮತ್ತು ತಮಿಳು ಸಂಸ್ಕೃತಿಯ ಅನನ್ಯತೆಯನ್ನು ಕಾಪಾಡಿಕೊಳ್ಳಲು, ಭ್ರಷ್ಟ ಮತ್ತು ವಿಭಜಕ ಡಿಎಂಕೆಯನ್ನು ಆದಷ್ಟು ಬೇಗ ಕಿತ್ತುಹಾಕುವುದು ಮುಖ್ಯ, ಅದನ್ನು ನಮ್ಮ ಮೈತ್ರಿಕೂಟ ಮಾಡುತ್ತದೆ” ಎಂದು ಪ್ರಧಾನಿ ಮೋದಿ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಶುಕ್ರವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಐಎಡಿಎಂಕೆ, ಬಿಜೆಪಿ ಮತ್ತು ಎಲ್ಲಾ ಮೈತ್ರಿ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಡಿಯಲ್ಲಿ ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಘೋಷಿಸಿದರು. 2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ.
Stronger together, united towards Tamil Nadu’s progress!
Glad that AIADMK joins the NDA family. Together, with our other NDA partners, we will take Tamil Nadu to new heights of progress and serve the state diligently. We will ensure a government that fulfils the vision of the…
— Narendra Modi (@narendramodi) April 11, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.