ನವದೆಹಲಿ: ಪುರಾತನ ಭಾರತೀಯ ಗ್ರಂಥ ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಯುನೆಸ್ಕೋ ತನ್ನ ವಿಶ್ವ ನೋಂದಣಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣವಾಗಿದೆ. ಈ ಸೇರ್ಪಡೆ ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆಯ ಪ್ರಜ್ಞೆಯನ್ನು ಪೋಷಿಸಿವೆ. ಅದರ ಒಳನೋಟಗಳು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೀಮದ್ ಭಗವದ್ಗೀತೆ ಮತ್ತು ಭರತ ಮುನಿಯವರ ನಾಟ್ಯಶಾಸ್ತ್ರವನ್ನು ಯುನೆಸ್ಕೋದ ಮೆಮೊರಿ ಆಫ್ ವರ್ಲ್ಡ್ ರಿಜಿಸ್ಟರ್ಗೆ ಸೇರ್ಪಡೆಗೊಳಿಸಿರುವ ಬಗ್ಗೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಘೋಷಣೆ ಮಾಡಿದ್ದು, ಅವರು ಇದನ್ನು “ಭಾರತದ ನಾಗರಿಕತೆಯ ಪರಂಪರೆಗೆ ಐತಿಹಾಸಿಕ ಕ್ಷಣ” ಎಂದು ಬಣ್ಣಿಸಿದ್ದಾರೆ.
ಅವರು ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಕಾಲಾತೀತ ಸಾಹಿತ್ಯಿಕ ಸಂಪತ್ತುಗಳಿಗಿಂತ ಹೆಚ್ಚಿನವು ಎಂದು ವರ್ಣಿಸಿದ್ದಾರೆ. ಅವು ಭಾರತದ ವಿಶ್ವ ದೃಷ್ಟಿಕೋನ ಮತ್ತು ನಾವು ಯೋಚಿಸುವ, ಅನುಭವಿಸುವ, ಬದುಕುವ ಮತ್ತು ವ್ಯಕ್ತಪಡಿಸುವ ವಿಧಾನವನ್ನು ರೂಪಿಸಿದ ತಾತ್ವಿಕ ಮತ್ತು ಸೌಂದರ್ಯದ ಅಡಿಪಾಯಗಳಾಗಿವೆ ಎಂದು ಬಣ್ಣಿಸಿದ್ದಾರೆ. ಶ್ರೀಮದ್ ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರದ ಸೇರ್ಪಡೆಯೊಂದಿಗೆ ಭಾರತವು ಈಗ ಈ ಅಂತರರಾಷ್ಟ್ರೀಯ ನೋಂದಣಿಯಲ್ಲಿ 14 ನಮೂದುಗಳನ್ನು ಹೊಂದಿದಂತಾಗಿದೆ.
A proud moment for every Indian across the world!
The inclusion of the Gita and Natyashastra in UNESCO’s Memory of the World Register is a global recognition of our timeless wisdom and rich culture.
The Gita and Natyashastra have nurtured civilisation, and consciousness for… https://t.co/ZPutb5heUT
— Narendra Modi (@narendramodi) April 18, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.