ನವದೆಹಲಿ: ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್ ಸೋಮವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಜಂಟಿ ಸಂಸದೀಯ ಸಮಿತಿ ಸಭೆಗೆ “ನ್ಯಾಷನಲ್ ಹೆರಾಲ್ಡ್ ಕಿ ಲೂಟ್” ಎಂದು ದಪ್ಪ ಅಕ್ಷರಗಳಲ್ಲಿ ಬರೆದಿರುವ ಹ್ಯಾಂಡ್ ಬ್ಯಾಗ್ ಹಿಡಿದು ಬರುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.
ಗಾಂಧಿ ಕುಟುಂಬದ ವಿರುದ್ಧ ತೀಕ್ಷ್ಣವಾದ ವಿರೋಧವನ್ನು ವ್ಯಕ್ತಪಡಿಸುವ ಸಲುವಾಗಿ ಅವರು ಈ ಬ್ಯಾಗ್ ಹಿಡಿದು ಬಂದಿದ್ದಾರೆ. ರಾಜಕೀಯ ಸಂದೇಶ ಸಾಧನಗಳಾಗಿ ಹ್ಯಾಂಡ್ ಬ್ಯಾಗ್ ಬಳಸುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಪ್ರತ್ಯುತ್ತರ ನೀಡುವ ಸಲುವಾಗಿ ಬಾನ್ಸುರಿ ಸ್ವರಾಜ್ ಅವರು ಹ್ಯಾಂಡ್ ಬ್ಯಾಗ್ ಬಳಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ತನಿಖೆಯ ನಡುವೆಯೇ ಸ್ವರಾಜ್ ಹ್ಯಾಂಡ್ ಬ್ಯಾಗ್ನೊಂದಿಗೆ ಸಂಸತ್ತಿನ ಅನೆಕ್ಸ್ನಲ್ಲಿ ಕಾಣಿಸಿಕೊಂಡಿದ್ದಾರೆ. 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಒಳಗೊಂಡ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಇಬ್ಬರ ಮೇಲೂ ಆರೋಪಪಟ್ಟಿ ಸಲ್ಲಿಸಿದೆ.
#WATCH | Delhi: BJP MP Bansuri Swaraj arrives at Parliament Annexe building to attend JPC meeting on 'One Nation One Election' carrying a bag with 'National Herald Ki Loot' written on it pic.twitter.com/i4zhdkdF0m
— ANI (@ANI) April 22, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.