ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆಯ ಬಗ್ಗೆ ಪ್ರಶ್ನಿಸಿದ ಪಾಕಿಸ್ಥಾನಿ ಪತ್ರಕರ್ತನನ್ನು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ ಬ್ರೂಸ್ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಅಮೆರಿಕಾ ಭಾರತದೊಂದಿಗೆ ಇದೆ ಅಷ್ಟೇ. ಇದಕ್ಕಿಂತ ಹೆಚ್ಚಿನದನ್ನು ನಾನು ಹೇಳುವುದಿಲ್ಲ ಎಂದಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಅಮೆರಿಕವು ಭಾರತದೊಂದಿಗೆ ನಿಂತಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದ್ದಾರೆ ಎಂದು ಬ್ರೂಸ್ ತಿಳಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಮತ್ತು ಗಾಯಗೊಂಡವರ ಚೇತರಿಕೆಗಾಗಿ ಅಮೆರಿಕ ಪ್ರಾರ್ಥಿಸುತ್ತದೆ ಎಂದು ಅವರು ಹೇಳಿದರು.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು, “ಅಧ್ಯಕ್ಷ ಟ್ರಂಪ್ ಮತ್ತು ಕಾರ್ಯದರ್ಶಿ ರುಬಿಯೊ ಸ್ಪಷ್ಟಪಡಿಸಿದಂತೆ, ಅಮೆರಿಕ ಭಾರತದೊಂದಿಗೆ ನಿಂತಿದೆ, ಎಲ್ಲಾ ಭಯೋತ್ಪಾದನಾ ಕೃತ್ಯಗಳನ್ನು ಬಲವಾಗಿ ಖಂಡಿಸುತ್ತದೆ. ನಾವು ಕಳೆದುಹೋದವರ ಜೀವಕ್ಕಾಗಿ ಪ್ರಾರ್ಥಿಸುತ್ತೇವೆ ಮತ್ತು ಗಾಯಗೊಂಡವರ ಚೇತರಿಕೆಗಾಗಿ ಪ್ರಾರ್ಥಿಸುತ್ತೇವೆ ಮತ್ತು ಈ ಘೋರ ಕೃತ್ಯದ ಅಪರಾಧಿಗಳನ್ನು ನ್ಯಾಯದ ಕಟಕಟೆಗೆ ತರಬೇಕೆಂದು ಕರೆ ನೀಡುತ್ತೇವೆ” ಎಂದು ಅವರು ಹೇಳಿದರು.
ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ಸಂತಾಪ ಸೂಚಿಸಲು ಅಧ್ಯಕ್ಷ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದರು. ಟ್ರಂಪ್ ಅವರ ಬೆಂಬಲಕ್ಕೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದರು ಮತ್ತು ಈ ಹೇಡಿತನ ಮತ್ತು ಘೋರ ಭಯೋತ್ಪಾದಕ ದಾಳಿಯ ಅಪರಾಧಿಗಳು ಮತ್ತು ಬೆಂಬಲಿಗರನ್ನು ನ್ಯಾಯದ ಕಟಕಟೆಗೆ ತರಲು ಭಾರತ ದೃಢನಿಶ್ಚಯ ಮಾಡಿದೆ ಎಂದಿದ್ದರು.
#WATCH | #PahalgamTerroristAttack | “…I’m not going to be remarking on it. I will say nothing more on that situation. The President and the Secretary have said things, as has the Deputy Secretary,” says Tammy Bruce, US State Department spokesperson, on being asked if the US… pic.twitter.com/gO7FQ3pNvu
— ANI (@ANI) April 24, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.